ಬೀದರ್ : ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರು ಗ್ರಾಮದ ಸೇತುವೆ ಬಳಿ ನಡೆದಿದೆ.
ಭಾಲ್ಕಿ ತಾಲೂಕಿನ ಲಾಧ ಗ್ರಾಮದ ಕುಮಾರ ನೌಬಾದ್(24) ಹಾಗೂ ಯಾದವ್ ಗೊವಿಂದರಾವ್(29) ಮೃತ ದುರ್ದೈವಿಗಳು. ಅಪಘಾತದಲ್ಲಿ ನಿಯಂತ್ರಣ ತಪ್ಪಿ ಲಾರಿ ಸೇತುವೆ ಮೇಲಿಂದ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನಾ ಸ್ಥಳಕ್ಕೆ ಮೆಹಕರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ: ಕರ್ನಾಟಕ ಕೋವಿಡ್ ವರದಿ : ರಾಜ್ಯದಲ್ಲಿ ಇಂದು 967 ಮಂದಿಗೆ ಕೋವಿಡ್, 10 ಸೋಂಕಿತರ ಸಾವು