ಬೀದರ್: ಒಂದಲ್ಲ ಎರಡಲ್ಲ ಸತತ ಆರು ತಿಂಗಳಿಂದ ಸರ್ಕಾರಿ ಶಾಲೆಯೊಂದರ ದೈಹಿಕ ಶಿಕ್ಷಕ ಶಾಲೆಗೆ ಚಕ್ಕರ್ ಹೊಡೆದು ವೇತನಕ್ಕೆ ಹಾಜರಾಗ್ತಿದ್ದ ಪ್ರಕರಣವೊಂದನ್ನು ಗ್ರಾಮಸ್ಥರೇ ಬಯಲು ಮಾಡಿದ್ದಾರೆ.
ತಾಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಶಾಲೆಗೆ ಬಾರದೆ ಮಕ್ಕಳ ಭವಿಷ್ಯದೊಂದಿಗೆ ಆಟವಾಡ್ತಿದ್ದಾರೆ ಎಂದು ಆರೋಪಿಸಿ ಶಾಲಾ ಮಕ್ಕಳೊಂದಿಗೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ಕುರಿತು ಹಲವು ಬಾರಿ ಹಿರಿಯ ಅಧಿಕಾರಿಗಳ ಗಮನಕ್ಕೆ ಗ್ರಾಮಸ್ಥರು ತಂದಿದ್ದರಂತೆ. ಇದರಿಂದ ಯಾವುದೇ ಪ್ರಯೋಜನವಾಗದೆ ಇದ್ದಾಗ ಪೋಷಕರು ರೋಚ್ಚಿಗೆದ್ದು, ತಪ್ಪಿತಸ್ಥ ಶಿಕ್ಷಕನ ವಜಾ ಮಾಡುವವರೆಗೆ ಶಾಲೆಯ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ವಿಷಯ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ ವಜಾ ಮಾಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿದೆ.