ETV Bharat / state

ವಿವೇಕಾನಂದರ ಚಿಂತನೆಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡುತ್ತಿದ್ದೇವೆ: ಜೆ.ಪಿ.ನಡ್ಡಾ - ಶ್ರೀ ಜ್ಯೋತಿರ್ಮಯಾನಂದ ಸ್ವಾಮೀಜಿ

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿದ ಸ್ವಾಮಿ ವಿವೇಕಾನಂದರು ನಮಗೆ ಪ್ರೇರಣೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ
author img

By

Published : Apr 21, 2023, 7:11 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ ಭೇಟಿ ನೀಡಿದರು

ಬೀದರ್ : ಗೋಮಾತೆಯ ಸೇವೆ, ಧರ್ಮ ರಕ್ಷಣೆಯ ಜತೆಯಲ್ಲಿ ಸಮಾಜವನ್ನು ಸ್ವಾವಲಂಬಿ, ಆತ್ಮ ನಿರ್ಭರ ಮಾಡುವಲ್ಲಿ ಮಠಗಳು ಹಾಗೂ ರಾಮಕೃಷ್ಣ ವಿವೇಕಾನಂದ ಆಶ್ರಮದ ಕೊಡುಗೆ ಅಪಾರ. ವಿವೇಕಾನಂದರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಸರ್ಕಾರ, ಮಠಗಳು ಸೇರಿ ಸ್ವಾವಲಂಬಿ ಮೂಲಕ ಭಾರತವನ್ನು ಬಲಿಷ್ಠ ಮಾಡಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಶುಕ್ರವಾರ ಜಿಲ್ಲೆಯ ಮಠಾಧೀಶರು, ಪೂಜ್ಯರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತೀಯ ಸಂಸ್ಕೃತಿಯನ್ನು ಜಗತ್ತಿನಲ್ಲಿ ಎತ್ತಿ ಹಿಡಿದ ಸ್ವಾಮಿ ವಿವೇಕಾನಂದರು ನಮಗೆ ಪ್ರೇರಣೆ. ವಿವೇಕಾನಂದರ ಚಿಂತನೆಗಳನ್ನು ಮೈಗೂಡಿಸಿಕೊಂಡು ನಾವು ಕೆಲಸ ಮಾಡುತ್ತಿದ್ದೇವೆ. ಸಮಾಜವನ್ನು ಅಂಧಕಾರದಿಂದ ಹೊರತಂದು ಪ್ರಕಾಶಮಯವಾಗಿ ಮಾಡಬೇಕಾಗಿದೆ ಎಂದರು.

ವಿವೇಕಾನಂದರು ಜ್ಞಾನವನ್ನು ಸಮಾಜಕ್ಕೆ ಸಮರ್ಪಿಸಿದ್ದಾರೆ. ಅವರ ಜೀವನ ನಮಗೆ ಪ್ರೇರಣೆ. ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ಸರ್ವ ಸಮಾಜ ಅಭಿವೃದ್ಧಿಯೊಂದಿಗೆ ಭಾರತವನ್ನು ಬಲಿಷ್ಠ ಮಾಡಬೇಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಕ್ಕಾಪಟ್ಟೆ ಲೀಡರ್​ಗಳಾಗಿದ್ದಾರೆ, ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ: ಬಿ ಎಲ್ ಸಂತೋಷ್

ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ, ಚಿದಂಬರಾಶ್ರಮದ ಡಾ. ಶಿವಕುಮಾರ ಸ್ವಾಮೀಜಿ, ಹಾವಗಿಲಿಂಗೇಶ್ವರ ಶಿವಾಚಾರ್ಯ ಹಲಬರ್ಗಾ, ಶಂಕರಲಿಂಗ ಶಿವಾಚಾರ್ಯ, ಚಂದ್ರಶೇಖರ ಶಿವಾಚಾರ್ಯ, ಚನ್ನಬಸವ ಸ್ವಾಮಿ, ಬಸವಲಿಂಗ ಸ್ವಾಮಿ, ಶರಣಕುಮಾರ ಸ್ವಾಮಿ, ಶಿವಾನಂದ ಸ್ವಾಮಿ, ಬಸವಲಿಂಗ ದೇವರು, ಮಹಾಲಿಂಗ ಸ್ವಾಮಿ, ಉದಯ ರಾಜಯೋಗೇಂದ್ರ ಸ್ವಾಮಿ ಇತರರಿದ್ದರು. ಇದಕ್ಕೂ ಮುನ್ನ ನಡ್ಡಾ ಅವರು ಆಶ್ರಮದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದರು.

ಸಿದ್ದಾರೂಢಸ್ವಾಮಿ ಮಠಕ್ಕೆ ಭೇಟಿ: ಹುಬ್ಬಳ್ಳಿಯ ಸಿದ್ದಾರೂಢಸ್ವಾಮಿ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು (ಏಪ್ರಿಲ್ 19-2023) ಭೇಟಿ ನೀಡಿ ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಉತ್ತರ ಕರ್ನಾಟಕದ ಪ್ರಸಿದ್ಧ ಮೂರು ಸಾವಿರ ಮಠಕ್ಕೆ ತೆರಳಿದ್ದ ಅವರು ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಮೂರು ಸಾವಿರ ಮಠದ ಸ್ವಾಮೀಜಿ ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರಿಗೆ ಸಾಥ್ ​ನೀಡಲು ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಿದ್ದರು. ಬೊಮ್ಮಾಯಿ ತಮ್ಮ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ತೆರೆದ ವಾಹನ ಮೂಲಕ ಭರ್ಜರಿ ರೋಡ್​ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ನಟ ಕಿಚ್ಚ ಸುದೀಪ್, ಶಾಸಕ ಅರವಿಂದ ಬೆಲ್ಲದ, ಲಿಂಗರಾಜ ಪಾಟೀಲ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಲಿಂಗಾಯತ ಮತಗಳನ್ನು ಸೆಳೆಯಲು ಶೆಟ್ಟರ್​ಗೆ ಟಾಸ್ಕ್ ಕೊಟ್ಟ 'ಕೈ': ಶೆಟ್ಟರ್ ಹಣಿಯಲು ಆರ್​ಎಸ್​ಎಸ್​ ರಣತಂತ್ರ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.