ಬೀದರ್: ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಪಶುಸಂಗೋಪನಾ ಇಲಾಖೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ರಾಜ್ಯದ ದಕ್ಷಿಣ ಕನ್ನಡ, ಮಡಿಕೇರಿ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸೇರಿದಂತೆ ಅನ್ಯ ರಾಜ್ಯದಿಂದ ರಾಜ್ಯಕ್ಕೆ ಆಮದಾಗುವ ಕೋಳಿ ಅಥವಾ ಇತರೆ ಪಕ್ಷಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಿಂದ ಹೊರ ಹೋಗುವ ಕೋಳಿಗಳ ವಾಹನಗಳಿಗೆ ಸಂಪೂರ್ಣ ಸ್ಯಾನಿಟೈಸರ್ ಬಳಸಲಾಗುತ್ತಿದೆ. ಈ ಕುರಿತಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ. ಒಂದು ವೇಳೆ ರಾಜ್ಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡರೆ ಅಗತ್ಯ ಕ್ರಮ ಕೈಗೊಳ್ಳಲು ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದೆ ಎಂದರು.
ಓದಿ: ಸಿಎಂ ಹುದ್ದೆ ಖಾಲಿಯಿಲ್ಲ, ಎರಡೂವರೇ ವರ್ಷ ಬಿಎಸ್ವೈ ಅವರೇ ಸಿಎಂ: ಜಗದೀಶ್ ಶೆಟ್ಟರ್
ಗೋ ಹತ್ಯೆ ಮಸೂದೆಗೆ ರಾಜ್ಯಪಾಲರ ಅಂಕಿತ ನಂತರ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಿದೆ. ಅಕ್ರಮವಾಗಿ ಕಸಾಯಿಖಾನೆಗೆ ಗೋ ಸಾಗಾಟ ಕುರಿತು ಸಾರ್ವಜನಿಕರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸಚಿವ ಪ್ರಭು ಚವ್ಹಾಣ್ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.