ETV Bharat / state

ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇವೆ: ಸಿದ್ದರಾಮಯ್ಯ - ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ

ಎರಡನೇ ಹಂತದ ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆಗೆ ಬಸವಕಲ್ಯಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

Opposition Leader Siddaramayya
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Feb 4, 2023, 8:25 AM IST

Updated : Feb 4, 2023, 1:15 PM IST

ಪ್ರಜಾಧ್ವನಿ ಯಾತ್ರೆಗೆ ಬಸವಕಲ್ಯಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಲನೆ

ಬೀದರ್: ಶರಣರ ಕರ್ಮ ಭೂಮಿ ಬಸವಕಲ್ಯಾಣದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ನ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಗೆ ಅದ್ಧೂರಿಯಾಗಿ ನಿನ್ನೆ ಚಾಲನೆ ನೀಡಲಾಯಿತು. ಬಸವಕಲ್ಯಾಣ ಹಾಗೂ ಭಾಲ್ಕಿಯಲ್ಲಿ ನಡೆದ ಯಾತ್ರೆಗೆ ಜನ ಸಾಗರವೇ ಹರಿದು ಬಂದಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಜಂಟಿ ನೇತೃತ್ವದಲ್ಲಿ ಮೊದಲ ಹಂತದ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಿ ಮುಗಿಸಿರುವ ಕಾಂಗ್ರೆಸ್ ಇದೀಗ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಯನ್ನು ಇಬ್ಬರು ನಾಯಕರು ಪ್ರತ್ಯೇಕವಾಗಿ ಆರಂಭಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬಸವ ಕಲ್ಯಾಣದಲ್ಲಿ ಚಾಲನೆ ಪಡೆದಿರುವ ಪ್ರಜಾಧ್ವನಿ ಯಾತ್ರೆಯು ಉತ್ತರ ಕರ್ನಾಟಕದ 112 ಕ್ಷೇತ್ರದಲ್ಲಿ ಸಂಚರಿಸಿ ಮಾ. 12 ರಂದು ಸಮಾರೋಪಗೊಳ್ಳಲಿದೆ. ದಕ್ಷಿಣ ಕರ್ನಾಟಕದಲ್ಲಿ ಡಿ ಕೆ ಶಿವಕುಮಾರ ನೇತೃತ್ವದಲ್ಲಿ 112 ಕ್ಷೇತ್ರಗಳಲ್ಲಿ ಯಾತ್ರೆ ನಡೆಯಲಿದೆ. ಇನ್ನೂ ಬೀದರ್​ ಜಿಲ್ಲೆಯಲ್ಲಿ ಎರಡು ದಿನ ಪ್ರಜಾಧ್ವನಿ ಯಾತ್ರೆ ಸಂಚರಿಸಲಿದೆ. ಜಿಲ್ಲೆಯ ಆರು ಕ್ಷೇತ್ರದ ಪೈಕಿ ಐದು ಕಡೆ ಬಹಿರಂಗ ಸಭೆ ಆಯೋಜಿಸಲಾಗಿದೆ.

ಇಲ್ಲಿನ ಐತಿಹಾಸಿಕ ಅನುಭವ ಮಂಟಪಕ್ಕೆ ಭೇಟಿ ನೀಡಿ ದರ್ಶನ ಪಡೆದ ಸಿದ್ದರಾಮಯ್ಯ ಅವರು, ನಗರದ ವಿವಿಧ ವೃತ್ತಗಳಲ್ಲಿ ಮಹಾತ್ಮರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಸವೇಶ್ವರ ಮಂದಿರಕ್ಕೆ ತೆರಳಿ ದರ್ಶನ ಪಡೆದರು. ಇಲ್ಲಿನ ಥೇರ ಮೈದಾನದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆ ಹಾಗೂ ಭಾಲ್ಕಿಯಲ್ಲಿ ನಡೆದ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಅನುಭವ ಮಂಟಪ ಪುನರ್ನಿರ್ಮಾಣ ಮಾಡಬೇಕು ಎಂದು ಸಮಿತಿ ರಚನೆ ಮಾಡಿದ್ದೆ. ಅವರು ವರದಿ ಕೊಟ್ಟಿದ್ದರು. ಅಷ್ಟೊತ್ತಿಗೆ ಚುನಾವಣೆ ಬಂತು ಅದನ್ನು ಪ್ರಾರಂಭ ಮಾಡಲು ಸಾಧ್ಯವಾಗಲಿಲ್ಲ. ಈಗ ಪ್ರಾರಂಭ ಮಾಡಿದ್ದಾರೆ. ಬಹಳ ಸಂತೋಷ. ಆದರೆ ಕೆಲಸ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಅನುಭವ ಮಂಟಪದ ಪುನರ್ನಿರ್ಮಾಣ ಕೆಲಸಗಳಿಗೆ ವೇಗ ಕೊಟ್ಟು, ಆದಷ್ಟು ಬೇಗ ಉದ್ಘಾಟನೆ ಮಾಡುತ್ತೇವೆ. ಈ ಕೆಲಸವನ್ನು ನಮ್ಮ ಪಕ್ಷ ಅಧಿಕಾರಕ್ಕೆ ಬಂದು ನಾವೇ ಮಾಡುತ್ತೇವೆ ಎನ್ನುವ ವಿಶ್ವಾಸ ಇದೆ ನಮಗೆ ಎಂದರು.

ಇಂದು ಕಾಂಗ್ರೆಸ್​ ಪರ ಗಾಳಿ ಬೀಸಲು ಪ್ರಾರಂಭವಾಗಿದ್ದು, ಬಿಜೆಪಿಯ ಕೆಲವು ಶಾಸಕರು ನಮ್ಮ ಪಕ್ಷಕ್ಕೆ ಬರಲು ತಯಾರಿದ್ದಾರೆ. ಕಾಂಗ್ರೆಸ್​ ಪಕ್ಷದ ಸಿದ್ಧಾಂತದಲ್ಲಿ, ಕಾರ್ಯಕ್ರಮಗಳಲ್ಲಿ ಹಾಗೂ ನೀತಿಯಲ್ಲಿ ಯಾರು ವಿಶ್ವಾಸ ಇಟ್ಟಿರ್ತಾರೋ ಅಂತಹವರು ಯಾರು ಬಂದರೂ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ. ಬಹುತೇಕ ಎಲ್ಲಾ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ನೂರಕ್ಕೆ ನೂರು ಸೋತು ಹೋಗುತ್ತಾರೆ ಎನ್ನುವ ಕ್ಷೇತ್ರಗಳಲ್ಲಿ ಮಾತ್ರ ಬೇರೆ ವಿಚಾರ ಮಾಡುತ್ತೇವೆ ಎಂದು ಹೇಳಿದರು.

ಕುರಿಯೊಂದಿಗೆ ಆಗಮಿಸಿದ ಅಭಿಮಾನಿಗಳು: ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿಜಯಸಿಂಗ್ ಅಭಿಮಾನಿಗಳು ಕುರಿಯೊಂದನ್ನು ಹೊತ್ತು ತಂದು ಗಮನ ಸೆಳೆದರು. ತಮ್ಮ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ನೀಡಲು ತಂದಿದ್ದ ಕುರಿಯ ಮೈಮೇಲೆ ಸಿದ್ಧರಾಮಯ್ಯನವರ ಹಾಗೂ ವಿಜಯಸಿಂಗ್ ಅವರ ಭಾವ ಚಿತ್ರದ ಪ್ಲೆಕ್ಸ್ ಸಹ ಹಾಕಿದ್ದರು.

ಇನ್ನು ನಿನ್ನೆ ರಾತ್ರಿ ಭಾಲ್ಕಿಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ ಮಾಡಿದ್ದರಿ. ಇಂದು ಔರಾದ್, ಮಧ್ಯಾಹ್ನ ಬೀದರ್ ಹಾಗೂ ಸಂಜೆ ಹುಮನಾಬಾದ್​ನಲ್ಲಿ ಸಮಾವೇಶ ನಡೆಯಲಿದೆ. ಸಿದ್ದರಾಮಯ್ಯ ಅವರಿಗೆ ಪ್ರಜಾಧ್ವನಿ ಯಾತ್ರೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ರಾಜಶೇಖರ ಪಾಟೀಲ್, ರಹೀಮ್ ಖಾನ್, ಅಜಯಸಿಂಗ್, ಜಮೀರ್ ಅಹ್ಮದ್ ಸಾಥ್​ ನೀಡಿದ್ದಾರೆ.

ಇದನ್ನೂ ಓದಿ: ಯುಪಿ, ಗುಜರಾತ್ ಪ್ರಯೋಗವನ್ನೇ ರಾಜ್ಯದಲ್ಲಿ ಮಾಡಲು ಕೋರ್ ಕಮಿಟಿಯಲ್ಲಿ ನಿರ್ಧಾರ: ಸಿ ಟಿ ರವಿ

Last Updated : Feb 4, 2023, 1:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.