ಬೀದರ್: ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಂದಗೂಳ ಸೇತುವೆ ಬಳಿ ನಡೆದಿದೆ.
ಬೀದರ್ ತಾಲೂಕಿನ ಹಿಪ್ಪಳಗಾಂವ ಗ್ರಾಮದ ನಿವಾಸಿ ಗುಂಡಪ್ಪ ನವರ ಮಗನಾದ ಮನೋಹರ್ ಕೋಳಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದಿಂದ ಮನನೊಂದು ಗುರುವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಜನವಾಡ ಪೊಲೀಸರು ಅಗ್ನಿ ಶಾಮಕ ಸಿಬ್ಬಂದಿಗಳೊಂದಿಗೆ ಶವದ ಶೋಧ ನಡೆಸಿ ಮೃತ ದೇಹವನ್ನು ಹೊರತೆಗೆದು ಕುಟುಂಬದವರಿಗೆ ಒಪ್ಪಿಸಿದ್ದಾರೆ. ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ಅತ್ತೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಆರೋಪ: ವ್ಯಕ್ತಿ ಕೊಲೆ ಮಾಡಿದ ಅಳಿಯ