ETV Bharat / state

ಬಸವಕಲ್ಯಾಣದಲ್ಲಿ ಹರಿದ ನೆತ್ತರು.. ಕ್ಷುಲ್ಲಕ ಕಾರಣಕ್ಕೆ ಜಗಳ, ಯುವಕನ ಕೊಲೆ - ಈಟಿವಿ ಭಾರತ ಕನ್ನಡ

ಕ್ಷುಲ್ಲಕ ಕಾರಣಕ್ಕಾಗಿ ಜಗಳ- ಯುವಕನ ಕೊಲೆಯಲ್ಲಿ ಅಂತ್ಯ- ಬೀದರ್​ ಜಿಲ್ಲೆಯ ಬಸವಕಲ್ಯಾಣದಲ್ಲಿ ಪ್ರಕರಣ

bidar
ಕ್ಷುಲ್ಲಕ ಕಾರಣಕ್ಕೆ ಜಗಳ
author img

By

Published : Feb 28, 2023, 11:10 AM IST

ಬೀದರ್​: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತ ಬಳಿ ನಡೆದಿದೆ. ತ್ರಿಪುರಾಂತ ನಿವಾಸಿ ಆನಂದ ಫುಲೆ (26) ಮೃತ ಯುವಕ.

ತ್ರಿಪುರಾಂತ ಮುಖ್ಯ ರಸ್ತೆಯಲ್ಲಿ ಆನಂದ ಮತ್ತು ದಿಗಂಬರ ದಾಸೂರೆ ಸೇರಿ ಕೆಲ ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ಆನಂದ ಮೇಲೆ ಎದುರಾಳಿ ಗುಂಪಿನ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆನಂದ ಫುಲೆಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಮ್ಮರಗಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಪ್ರಕರಣದಲ್ಲಿ ಗಾಯಗೊಂಡ ದಿಗಂಬರ ಎಂಬವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ಹುಮನಾಬಾದ ಎಎಸ್​ಪಿ ಶಿವಾಂಶು ರಾಜಪುತ್, ಸಿಪಿಐ ಸುಶೀಲಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ವಿಜಯಪುರ: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವು, ಹಣ ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.