ಬಸವಕಲ್ಯಾಣ: ಸಾಲದ ಹೊರೆಯಿಂದ ಬೇಸತ್ತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಟಗೇರಾ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹಬೂಬ್ ಪಠಾಣ(23) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ ಈತ ಸಾಲದಿಂದ ಬೇಸತ್ತು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಿಪಿಐ ಮಹೇಶ್ ಗೌಡ ಪಾಟೀಲ್, ಪಿಎಸ್‌ಐ ಬಸಲಿಂಗಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.