ETV Bharat / state

ದಳಪತಿಗಳಿಗೆ ಇಂದು ಆಂಧ್ರ ಸಿಎಂ ಸಾಥ್​​​​... ಮಂಡ್ಯದಲ್ಲಿ ನಿಖಿಲ್​​ ಪರ ನಾಯ್ಡು ಪ್ರಚಾರ! - jds campiagn

ಮಂಡ್ಯ ಪ್ರಚಾರಕ್ಕೆ ಇಂದು ಆಂಧ್ರ ಸಿಎಂ ಎಂಟ್ರಿ. ನಿಖಿಲ್ ಪರ ಚಂದ್ರಬಾಬು ನಾಯ್ಡು ಪ್ರಚಾರ. ನಾಯ್ಡುಗಳ ಮತ ಪಡೆಯಲು ದಳಪತಿಗಳ ರಣತಂತ್ರ.

ಸಂಗ್ರಹ ಚಿತ್ರ
author img

By

Published : Apr 15, 2019, 11:28 AM IST

ಬೆಂಗಳೂರು: ಶತಾಯಗತಾಯ ಮೂರು ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಣತಂತ್ರ ರೂಪಿಸಿದ್ದಾರೆ.

ಪ್ರತಿಷ್ಠೆಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಪ್ರಚಾರ ನಡೆಸಲು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಕರೆಸಲಾಗುತ್ತಿದೆ. ಪಕ್ಷೇತರ ಅಭ್ಯರ್ಥಿ ನಟಿ ಸುಮಲತಾ ಅಂಬರೀಶ್ ಅವರನ್ನು ಮಣಿಸಲು ಚಂದ್ರಬಾಬು ನಾಯ್ಡು ಮೂಲಕ ಪ್ರಚಾರ ನಡೆಸಿ ತೆಲುಗು ಭಾಷಿಕರು ಹಾಗೂ ನಾಯ್ಡು ಸಮುದಾಯದ ಮತ ಸೆಳೆಯುವ ತಂತ್ರವನ್ನು ಗೌಡರು ಹೆಣೆದಿದ್ದಾರೆ ಎನ್ನಲಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಇಂದು ಸಂಜೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಜೊತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜಂಟಿ ಪ್ರಚಾರ ನಡೆಸಲಿದ್ದಾರೆ.

ಪಾಂಡವಪುರ ತಾಲೂಕಿನ ಕ್ರೀಡಾಂಗಣದಲ್ಲಿ ಇಂದು ಸಂಜೆ 5 ಗಂಟೆಗೆ ಬಹಿರಂಗ ಸಮಾವೇಶ ಹಮ್ಮಿಕೊಂಡಿದ್ದು, ಇದರಲ್ಲಿ ಚಂದ್ರಬಾಬು ನಾಯ್ಡು ಭಾಗಿಯಾಗಲಿದ್ದಾರೆ. ಅದೇ ರೀತಿ ಜೆಡಿಎಸ್ ವರಿಷ್ಠ ದೇವೇಗೌಡರು, ಚಿಕ್ಕಮಂಗಳೂರು ಹಾಗೂ ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ ಮೊಮ್ಮಗನ ಪರ ಪ್ರಚಾರ ನಡೆಸಲಿದ್ದಾರೆ. ಸಿಎಂ ಹೆಚ್​ಡಿಕೆ ಮಂಡ್ಯದಲ್ಲೇ ವಾಸ್ತವ್ಯ ಹೂಡಿದ್ದು, ಕೆ.ಆರ್.ನಗರ, ಪಾಂಡವಪುರ, ಬನ್ನೂರಿನಲ್ಲಿ ಇಂದು ಚುನಾವಣಾ ಪ್ರಚಾರ ಮಾಡಲಿದ್ದಾರೆ.

ದೊಡ್ಡಗೌಡರ ಕುಟುಂಬ ಸದಸ್ಯರು ನಿಂತಿರುವ ಹಾಸನ, ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಗೆಲ್ಲಲು ಜೆಡಿಎಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ತಾತ, ಮೊಮ್ಮಕ್ಕಳು ಗೆಲ್ಲದಿದ್ದರೆ ಮೈತ್ರಿ ಸರ್ಕಾರಕ್ಕೆ ಸಂಚಕಾರ ಬರಬಹುದು. ಜೊತೆಗೆ ಮಂಡ್ಯದಲ್ಲಿ ಮಗ ಸೋತರೆ ಮುಖ್ಯಮಂತ್ರಿಗೆ ಮುಖಭಂಗವಾಗಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

Intro:ಬೆಂಗಳೂರು : ಶತಾಯಗತಾಯ ಮೂರು ಕ್ಷೇತ್ರಗಳನ್ನು ಗೆಲ್ಲಲೇ ಬೇಕೆಂದು ಹಠಕ್ಕೆ ಬಿದ್ದಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಣತಂತ್ರ ರೂಪಿಸಿದ್ದಾರೆ.
ಪ್ರತಿಷ್ಠೆಯ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಪ್ರಚಾರ ನಡೆಸಲು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಕರೆಸಲಾಗುತ್ತಿದೆ.Body:ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ನಟಿ ಸುಮಲತಾ ಅಂಬರೀಶ್ ಅವರನ್ನು ಮಣಿಸಲು ಇನ್ನಿಲ್ಲದ ಕಸರತ್ತು‌ ನಡೆಸುತ್ತಿರುವ ಗೌಡರ ಕುಟುಂಬ, ಈಗ ಚಂದ್ರಬಾಬು ನಾಯ್ಡು ಮೂಲಕ ಪ್ರಚಾರ ನಡೆಸಿ ತೆಲುಗು ಭಾಷಿಕರು ಹಾಗೂ ನಾಯ್ಡು ಸಮುದಾಯದ ಮತ ಸೆಳೆಯುವ ತಂತ್ರ ಎನ್ನಲಾಗಿದೆ.
ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಇಂದು ಸಂಜೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಜೊತೆ ಜಂಟಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜಂಟಿ ಪ್ರಚಾರ ನಡೆಸಲಿದ್ದಾರೆ.
ಪಾಂಡವಪುರ ತಾಲ್ಲೂಕಿನ ಕ್ರೀಡಾಂಗಣದಲ್ಲಿ ಇಂದು ಸಂಜೆ 5 ಗಂಟೆಗೆ ಬಹಿರಂಗ ಸಮಾವೇಶ ಹಮ್ಮಿಕೊಂಡಿದ್ದು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ.
ಅದೇ ರೀತಿ ಜೆಡಿಎಸ್ ವರಿಷ್ಠ ದೇವೇಗೌಡರು, ಚಿಕ್ಕ ಮಂಗಳೂರು ಹಾಗೂ ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ ಇಂದು ಮೊಮ್ಮಗನ ಒರ ತಾತ ಪ್ರಚಾರ ನಡೆಸಲಿದ್ದಾರೆ.
ಮೈತ್ರಿ ಧರ್ಮದಲ್ಲಿ ಜೆಡಿಎಸ್ ಪಾಲಿಗೆ 7 ಕ್ಷೇತ್ರಗಳು ಲಭಿಸಿವೆ.
ಅದರಲ್ಲಿ ದೊಡ್ಡಗೌಡರ ಕುಟುಂಬ ಸದಸ್ಯರು ನಿಂತಿರುವ ಹಾಸನ, ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ.
ತಾತ, ಮೊಮ್ಮಕ್ಕಳು ಗೆಲ್ಲದಿದ್ದರೆ ಮೈತ್ರಿ ಸರ್ಕಾರಕ್ಕೆ ಸಂಚಕಾರ ಬರಬಹುದು. ಜೊತೆಗೆ ಮಂಡ್ಯದಲ್ಲಿ ಮಗ ಸೋತರೆ ಮುಖ್ಯಮಂತ್ರಿಗೆ ಮುಖಭಂಗವಾಗಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಪುತ್ರ ನಿಖಿಲ್ ಗೆಲುವಿಗೆ ಒಂದು ವಾರಕ್ಕೂ ಹೆಚ್ಚು ಕಾಲ ಸಿಎಂ ಮಂಡ್ಯದಲ್ಲೇ ವಾಸ್ತವ್ಯ ಹೂಡಿದ್ದು, ಇಂದೂ ಸಹ ಮಂಡ್ಯ, ಕೆ.ಆರ್.ನಗರ, ಪಾಂಡವಪುರ, ಬನ್ನೂರುನಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ನಾಳೆ ಸಂಜೆ ಐದು ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗುವ ಹಿನ್ನೆಲೆಯಲ್ಲಿ ನಾಳೆ ಸಂಜೆವರೆಗೂ ಮಂಡ್ಯದಲ್ಲಿ ಪ್ರಚಾರ ನಡೆಸುವ ಸಿಎಂ ಕುಮಾರಸ್ವಾಮಿ ಅವರು ನಂತರ ರಸ್ತೆ ಮೂಲಕ ಬೆಂಗಳೂರಿಗೆ ವಾಪಸ್ ಅಗಲಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.