ಬೆಂಗಳೂರು: ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾವೇರಿ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡುತ್ತಿದ್ದಾರೆ.
ಸಚಿವರಾದ ಕೆ.ಜೆ.ಜಾರ್ಜ್, ಶಿವಾನಂದ ಪಾಟೀಲ್, ಕೆ.ಎನ್.ರಾಜಣ್ಣ, ಬಂಗಾರಪೇಟೆ ನಾರಾಯಣಸ್ವಾಮಿ, ಭೈರತಿ ಬಸವರಾಜು, ಭೈರತಿ ಸುರೇಶ್, ಮುನಿರತ್ನ, ಆನೇಕಲ್ ಶಿವಣ್ಣ ಸೇರಿ ಅನೇಕರು ಭೇಟಿ ನೀಡಿ, ಸಿದ್ದರಾಮಯ್ಯ ಜೊತೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು ದೆಹಲಿಯಿಂದ ವಾಪಸ್ ಆಗಿದ್ದು, ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಮಾತನಾಡಿದ ಸಚಿವ ಪರಮೇಶ್ವರ್ ನಾಯ್ಕ, ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಇಲಾಖೆ ಸಂಬಂಧ ಕೆಲ ಸಲಹೆ ಪಡೆಯಲು ಬಂದಿದ್ದೇನೆ. ದೇವೇಗೌಡರ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.