ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಖದೀಮರ ಹೆಡೆಮುರಿ ಕಟ್ಟುವಲ್ಲಿ ಸಿಲಿಕಾನ್ ಸಿಟಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ಯಾಮ್ ದಾಸ್ , ಹರೀಶ್ ಕುಮಾರ್, ಜಿಬಿನ್ ಜೋನ್ ಎಂಬುವರನ್ನು ಸುದ್ದಗುಂಟೆ ಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾಗಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ಈ ಖದೀಮರ ಮೇಲೆ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು. ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾಗಲೇ ನಿನ್ನೆ ಸುದ್ದಗುಂಟೆ ಪಾಳ್ಯ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಇವರೆಲ್ಲರು ವಿದ್ಯಾವಂತರು ಎಂದು ತಿಳಿಸಿದರು.
ಬಂಧಿತರಿಂದ 4.66 ಲಕ್ಷ ರೂ. ಮೌಲ್ಯದ 23.30 ಕೆಜಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೇರಳ ಮತ್ತು ವಿಶಾಖಪಟ್ಟಣದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡ್ತಿದ್ದರು ಎನ್ನಲಾಗಿದೆ. ಈ ಗ್ಯಾಂಗ್ನಲ್ಲಿ ಇನ್ನಿಬ್ಬರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.