ETV Bharat / state

ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು: ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ! - ಬಿ.ಎಸ್.ಯಡಿಯೂರಪ್ಪ

ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ- ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ- ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರರಾವ್,ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದ ಡಿ.ವಿ.ಸದಾನಂದಗೌಡ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿ

ಕೋರ್ ಕಮಿಟಿ ಸಭೆ
author img

By

Published : Apr 25, 2019, 1:40 PM IST

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರರಾವ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಘೋಷಣೆಯಿಂದ ಉಂಟಾಗಿರುವ ರಾಜಕೀಯ ಅಸ್ಥಿರತೆಯ ಲಾಭ ಪಡೆಯುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಕೋರ್ ಕಮಿಟಿ ಸಭೆಗೂ ಮುನ್ನ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸ್ಥಳೀಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಶಾಸಕ ಸುಭಾಶ್ ಗುತ್ತೇದಾರ್, ಮಾಜಿ ಸಚಿವ ಸಿ.ಸಿ. ಪಾಟೀಲ್, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರೊಂದಿಗೆ ಯಡಿಯೂರಪ್ಪ ಚರ್ಚಿಸಿದರು.

ಮುಖಂಡರ ಸಭೆ ನಂತರ ಮಾತನಾಡಿದ ಮಾಜಿ ಎಂಎಲ್​ಸಿ ಶಶಿಲ್ ನಮೋಶಿ, ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಇಂದು ಪಕ್ಷದ ಪ್ರಮುಖರು ಅಭಿಪ್ರಾಯ ಸಂಗ್ರಹಿಸಿದ್ದಾರೆ‌. ಚಿಂಚೋಳಿ ಕ್ಷೇತ್ರಕ್ಕೆ ನಾಲ್ವರು ಆಕಾಂಕ್ಷಿಗಳಿದ್ದಾರೆ. ಮಾಜಿ ಶಾಸಕ ಸುನೀಲ್ ವಲ್ಯಾಪುರೆ, ನಾಮದೇವ್ ರಾಥೋಡ್ ಹಾಗೂ ಸಂಜೀವ್ ಯಾಕಾಪುರೆ ಅವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಅಂತಿಮವಾಗಿ ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಸೂಚಿಸಿದರೂ ಸಹ ಕಲಬುರಗಿ ಜಿಲ್ಲೆಯ ಬಿಜೆಪಿ ಪ್ರಮುಖರು ಒಪ್ಪಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

Intro:ಬೆಂಗಳೂರು: ಮಲ್ಲೇಶ್ ರಂ‌ಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭೊಂಡಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಆರಂಭಗೊಂಡಿದ್ದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಾಗುತ್ತಿದೆ.
Body:ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರರಾವ್,ಮಾಜಿ ಸಿಎಂ ಜಗದೀಶ್ ಶೆಟ್ಟರ್,ಸಂಸದ ಡಿ.ವಿ.ಸದಾನಂದಗೌಡ,ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದು,ರಮೇಶ್ ಜಾರಕಿಹೊಳಿ ರಾಜೀನಾಮೆ ಘೋಷಣೆಯಿಂದ ಉಂಟಾಗಿರುವ ರಾಜಕೀಯ ಅಸ್ತಿರತೆಯ ಲಾಭ ಪಡೆಯುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಕೋರ್ ಕಮಿಟಿ ಸಭೆಗೂ ಮುನ್ನ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸ್ಥಳೀಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು.ಶಾಸಕ ಸುಭಾಶ್ ಗುತ್ತೇದಾರ್,ಮಾಜಿ ಸಚಿವ ಸಿ.ಸಿ.ಪಾಟೀಲ್,ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರೊಂದಿಗೆ ಯಡಿಯೂರಪ್ಪ ಚರ್ಚಿಸಿದರು.

ಮುಖಂಡರ ಸಭೆ ನಂತರ ಮಾತನಾಡಿದ ಮಾಜಿ ಎಂಎಲ್ಸಿ
ಶಶಿಲ್ ನಮೋಶಿ,ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಇಂದು ಪಕ್ಷದ ಪ್ರಮುಖರು ಅಭಿಪ್ರಾಯ ಸಂಗ್ರಹಿಸಿದ್ದಾರೆ‌.ಚಿಂಚೋಳಿ ಕ್ಷೇತ್ರಕ್ಕೆ ನಾಲ್ವರು ಆಕಾಂಕ್ಷಿಗಳಿದ್ದಾರೆ.ಮಾಜಿ ಶಾಸಕ ಸುನೀಲ್ ವಲ್ಯಾಪುರೆ,ಉಮೇಶ್ ಜಾದವ್ ಸೂಚಿಸುವವರು, ನಾಮದೇವ್ ರಾಥೋಡ್ ಹಾಗೂ ಸಂಜೀವ್ ಯಾಕಾಪುರೆ ಅವರ ಹೆಸರುಗಳನ್ನು ಸೂಚಿಸಿದ್ದೇವೆ.ಪಕ್ಷ ಯಾರನ್ನು ಅಭ್ಯರ್ಥಯನ್ನಾಗಿ ಸೂಚಿಸಿದರೂ ಸಹ ಗುಲ್ಬರ್ಗಾ ಜಿಲ್ಲೆಯ ಬಿಜೆಪಿ ಪ್ರಮುಖರು ಒಪ್ಪಿಕೊಳ್ಳುತ್ತೇವೆ ಎಂದರು.
Conclusion:-ಪ್ರಶಾಂತ್ ಕುಮಾರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.