ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈ ಸಂಬಂಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ.
ವಿಧಾನಸಭೆಯಲ್ಲಿ ಇಂದು ನಡೆಯುವ ವಿದ್ಯಮಾನಗಳ ಕುರಿತು ಶಾಸಕರೊಂದಿಗೆ ಚರ್ಚಿಸುತ್ತಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರೊಂದಿಗೆ ಮಾತನಾಡಿದ ಬಿಎಸ್ವೈ, ತಮ್ಮ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಅತೃಪ್ತ ಶಾಸಕರ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದ್ದು, ಅದರ ತೀರ್ಪಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಹೇಳಿದ್ರು.