ಬೆಂಗಳೂರು: ಮಾಯಕ್ಕ ಎಂಬ ವಿಕಲಚೇತನ ಮಹಿಳೆಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂಪಾಯಿಗಳ ಚೆಕ್ ವಿತರಿಸಿದರು.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಾಯಕ್ಕ ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು. ಬಳಿಕ ಸಿಎಂ ವಿಕಲ ಚೇತನ ಮಾಯಕ್ಕನಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂಪಾಯಿಗಳ ಚೆಕ್ ನೀಡಿ ಪ್ರೋತ್ಸಾಹಿಸಿದ್ದಾರೆ.
ಮಾಯಕ್ಕನ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ನೀಡಲು ವ್ಯವಸ್ಥೆ ಮಾಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿಯವರಗೆ ಸಿಎಂ ಸೂಚಿಸಿದರು.