ETV Bharat / state

ಅತೃಪ್ತರ ಜತೆ ಸಿಎಂ-ವೇಣುಗೋಪಾಲ್ ಮಾತುಕತೆ: ಸಚಿವ ಸ್ಥಾನ ನೀಡುವ ಆಫರ್..?

author img

By

Published : Jul 1, 2019, 7:04 PM IST

ಸಿಎಂ ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಅತೃಪ್ತರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗ್ತಿದೆ.

ಸಿಎಂ-ವೇಣುಗೋಪಾಲ್

ಬೆಂಗಳೂರು: ಶಾಸಕರಾದ ಆನಂದ ಸಿಂಗ್ ಹಾಗೂ ರಮೇಶ್​ ಜಾರಕಿಹೊಳಿ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಪತನಗೊಳ್ಳುವ ಭೀತಿ ಎದುರಾಗಿದೆ. ಆನಂದ್ ಸಿಂಗ್ ಸೇರಿದಂತೆ ಅತೃಪ್ತ ಶಾಸಕರ ಜತೆ ಸಿಎಂ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗ್ತಿದೆ.

ಸಿಎಂ ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಸರ್ಕಾರ ಉಳಿಸಿಕೊಳ್ಳಲು ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಆಫರ್ ನೀಡುತ್ತಿದ್ದಾರೆ. ಅತೃಪ್ತರ ಗುಂಪಿನಲ್ಲಿದ್ದ ಶಾಸಕ ನಾಗೇಂದ್ರ ಜತೆ ವೇಣುಗೋಪಾಲ್ ಮಾತನಾಡಿ, ಪಕ್ಷಕ್ಕೆ ರಾಜೀನಾಮೆ ನೀಡಬಾರದು. ನಿಮಗೆ ಸಚಿವ ಸ್ಥಾನ ನೀಡಲಾಗುವುದೆಂದು ಭರವಸೆ ನೀಡಿದ್ದಾರೆ. ಹಾಗೆಯೇ ಮುಖ್ಯಮಂತ್ತಿ ಕುಮಾರಸ್ವಾಮಿ ಅವರು ಅಮೆರಿಕದಿಂದಲೇ ಶಾಸಕ ನಾಗೇಂದ್ರ ಅವರಿಗೆ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರ ಭಾಗವಾಗಿರುವಂತೆ ಕೇಳಿಕೊಂಡಿದ್ದಾರೆಂದು ಹೇಳಲಾಗ್ತಿದೆ.

ಆನಂದ್ ಸಿಂಗ್, ರಮೇಶ್ ಜಾರಕಿಹೊಳಿಯ ಅವರೊಂದಿಗೆ ಆಪ್ತ ಶಾಸಕರಾದ ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಕಂಪ್ಲಿ ಗಣೇಶ್, ಬಿ ಸಿ ಪಾಟೀಲ್, ಶಿವರಾಮ್ ಹೆಬ್ಬಾರ್, ಅತೃಪ್ತ ಶಾಸಕರ ಜತೆ ಇವರಿಬ್ಬನ್ನು ಸಂಪರ್ಕಿಸಿ ಮನವೊಲಿಸುತ್ತಿದ್ದಾರೆ ಎನ್ನಲಾಗ್ತಿದೆ.

ಶಾಸಕ ಆನಂದ್ ಸಿಂಗ್ ಮತ್ತು ರಮೇಶ್​ ಜಾರಕಿಹೊಳಿ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್​ನವರು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ವೇಣುಗೋಪಾಲ್ ಬಳಿ ವರದಿ ಕೇಳಿದ್ದಾರೆ. ಹೀಗಾಗಿ ಶಾಸಕರ ರಾಜೀನಾಮೆ ಪರಿಸ್ಥಿತಿ ನಿಭಾಯಿಸಲು ವೇಣುಗೋಪಾಲ್ ನಾಳೆ ಬೆಂಗಳೂರಿಗೆ ಆಗಮಿಸಿ ಅತೃಪ್ತ ಕಾಂಗ್ರೆಸ್ ಶಾಸಕರ ಜತೆ ಖುದ್ದಾಗಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

Intro:ಅತೃಪ್ತರ ಜತೆ ಸಿಎಂ - ವೇಣುಗೋಪಾಲ್ ಮಾತುಕತೆ
ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ಒಡುವ ಆಫರ್..?

ಬೆಂಗಳೂರು :

ಶಾಸಕ ಆನಂದ ಸಿಂಗ್ ರಾಜೀನಾಮೆ ನೀಡಿದ ತಕ್ಷಣ ತಲ್ಲಣಗೊಂಡಿರುವ ಸಿಎಂ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮೈತ್ರಿ ಸರಕಾರ ಪತನ ಗೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಆನಂದ್ ಸಿಂಗ್ ಸೇರಿದಂತೆ ಅತೃಪ್ತ ಶಾಸಕರ ಜತೆ ಇಬ್ಬರೂ ಮುಖಂಡರು ಮಾತನಾಡತೊಡಗಿದ್ದು ಸರಕಾರ ಉಳಿಸಿಕೊಳ್ಳಲು ಸಚಿವ ಸ್ಥಾನ ನೀಡುವ ಆಫರ್ ನೀಡುತ್ತಿದ್ದಾರೆಂದು ಹೇಳಲಾಗಿದೆ.

Body: ಅತೃಪ್ತರ ಗುಂಪಿನಲ್ಲಿದ್ದ ಶಾಸಕ ನಾಗೇಂದ್ರ ಜತೆ ವೇಣುಗೋಪಾಲ್ ಮಾತನಾಡಿ ಪಕ್ಷಕ್ಕೆ ರಾಜೀನಾಮೆ ನೀಡಬಾರದು. ನಿಮಗೆ ಸಚಿವ ಸ್ಥಾನ ನೀಡಲಾಗುವುದೆಂದು ಭರವಸೆ ನೀಡಿದ್ದಾರೆಂದು ಹೇಳಲಾಗಿದೆ.

ಮುಖ್ಯಮಂತ್ತಿ ಕುಮಾರಸ್ವಾಮಿ ಅಮೇರಿಕಾದಿಂದಲೇ ಶಾಸಕ ನಾಗೇಂದ್ರ ಜತೆ ಮಾತನಾಡಿ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದು ಮೈತ್ರಿ ಸರಕಾರದ ಭಾಗವಾಗಿರುವಂತೆ ಕೇಳಿಕೊಂಡಿದ್ದಾರೆಂದು ಹೇಳಲಾಗಿದೆ.

ಪಕ್ಷ ಬಿಡಲಿದ್ದಾರೆಂದು ಭಾವಿಸಲಾಗಿರುವ ರಮೇಶ್ ಜಾರಕಿಹೊಳಿಯ ಆಪ್ತ ಶಾಸಕ ಮಹೇಶ್ ಕಮಟಳ್ಳಿ, ಶ್ರೀಮಂತ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಕಂಪ್ಲಿ ಗಣೇಶ್, ಬಿಸಿ ಪಾಟೀಲ್, ಶಿವರಾಮ್ ಹೆಬ್ಬಾರ್, ಆನಂದ್ ಸಿಂಗ್ ಸೇರಿದಂತೆ ಅತೃಪ್ತ ಶಾಸಕರ ಜತೆ ಕಾಂಗ್ರೆಸ್ ನ ಹಿರಿಯ ನಾಯಕರು ಮತ್ತು ಸಿಎಂ ಕುಮಾರಸ್ವಾಮಿ ಸಂಪರ್ಕಿಸಲು ಪ್ರಯತ್ನಿಸಿ ಮನವೊಲಿಸುತ್ತಿದ್ದಾರೆ ಎನ್ನಲಾಗಿದೆ.

Conclusion: ಕಾಂಗ್ರೆಸ್ ಹೈಕಮಾಂಡ್ ಶಾಸಕ ಆನಂದ್ ಸಿಂಗ್ ಮತ್ತು ರಮೇಶ ಜಾರಕಿಹೊಳಿ ರಾಜೀನಾಮೆ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬಳಿ ವರದಿ ಕೇಳಿದ್ದಾರೆ ಎನ್ನಲಾಗಿದೆ. ಶಾಸಕರ ರಾಜೀನಾಮೆ ಪರಿಸ್ಥಿತಿ ನಿಭಾಯಿಸಲು ವೇಣುಗೋಪಾಲ್ ನಾಳೆ ಬೆಂಗಳೂರಿಗೆ ಆಗಮಿಸಿ ಅತೃಪ್ತ ಕಾಂಗ್ರೆಸ್ ಶಾಸಕರ ಜತೆ ಖುದ್ದಾಗಿ ಮಾತನಾಡಲಿದ್ದಾರೆನ್ನಲಾಗಿದೆ .

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.