ಬೆಂಗಳೂರು: ಎರಡನೇ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಡಿ.ವಿ. ಸದಾನಂದಗೌಡ, ಇಂದು ನಗರಕ್ಕೆ ಹಿಂದಿರುಗುತ್ತಿದ್ದು ಸಂಜೆ ರೋಡ್ ಶೋ ನಡೆಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30 ಕ್ಕೆ ಡಿವಿಎಸ್ ಆಗಮಿಸಲಿದ್ದು, ಯಲಹಂಕ, ದೇವನಹಳ್ಳಿ, ಬ್ಯಾಟರಾಯನಪುರ ಕ್ಷೇತ್ರದ ಪ್ರಮುಖರು ಅವರಿಗೆ ಸ್ವಾಗತ ಕೋರಲಿದ್ದಾರೆ. ವಿಮಾನ ನಿಲ್ದಾಣದಿಂದ ಸಂಜಯ ನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಸಂಜೆ 4 ಗಂಟೆಗೆ ಆಗಮಿಸುವ ಸಚಿವರು, ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ಅವರ ನಿವಾಸದ ವರೆಗೆ ತೆರಳಲಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎಲ್ಲ ಬಿಜೆಪಿ ನಾಯಕರುಗಳು, ಪ್ರಮುಖರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.