ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರುಎಣಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಮರುಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಮೇ 8ರಂದು ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳು ಮತ್ತು ಪೋಷಕರ ಕೋರಿಕೆಯ ಮೇರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಮರುಮೌಲ್ಯಮಾಪನ ಹಾಗೂ ಮರು ಎಣಿಕೆಯನ್ನು ಮೇ 8ರಿಂದ ಮೇ 10ರವರೆಗೂ ವಿಸ್ತರಿಸಲಾಗಿದೆ. ಈಗ ನಿಗದಿಪಡಿಸಿದ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸುವುದಿಲ್ಲ ಎಂದು ಪಿಯು ಮಂಡಳಿ ಸುತ್ತೋಲೆ ಹೊರಡಿಸಿದೆ.