ಬೆಂಗಳೂರು: ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ದೇವೇಗೌಡರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದರು.
ಪದ್ಮನಾಭ ನಗರದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಪಕ್ಷದ ಬಗ್ಗೆ ಕೆಲವೊಂದಿಷ್ಟು ವಿಚಾರಗಳನ್ನು ಮಾತನಾಡಬೇಕಾಗಿತ್ತು. ಹಲವಾರು ಮಹತ್ವದ ವಿಚಾರಗಳ ಕುರಿತು ಚರ್ಚಿಸಿದ್ದೇವೆ. ಆದರೆ ಏನು ಮಾತನಾಡಿದ್ದೇವೆ ಅನ್ನೋದನ್ನು ಬಹರಿಂಗಪಡಿಸಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ದೇವೇಗೌಡರು ಕೆಲವೊಂದಿಷ್ಟು ವಿಚಾರಗಳ ಬಗ್ಗೆ ನಮ್ಮ ಮುಂದೆ ಸ್ಪಷ್ಟವಾದ ಮಾತುಗಳ್ನನಾಡಿದ್ದಾರೆ. ಆ ಬಗ್ಗೆ ನಮ್ಮ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ದಿನೇಶ್ ಸ್ಪಷ್ಟಪಡಿಸಿದರು.
ಇನ್ನು, ಆಪರೇಷನ್ ಕಮಲ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷರು, ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ. ಸಚಿವ ಸಂಪುಟದ ಪುನಾರಚನೆ ವಿಚಾರದ ಬಗ್ಗೆ ಏನೂ ಮಾತಾಡುವುದಿಲ್ಲ. ಸ್ಪಷ್ಟ ತೀರ್ಮಾನಕ್ಕೆ ಬಂದ ನಂತರವೇ ಎಲ್ಲವನ್ನು ತಿಳಿಸುತ್ತೇವೆ ಎಂದರು.