ಬೆಂಗಳೂರು: ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಅರೋಪಿ ಮಾಜಿ ಸಚಿವ ರಾಮದಾಸ್ ವಿರುದ್ಧದ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಖುಲಾಸೆಗೊಳಿಸಿದೆ.
ಸೋನಿಯಾ ಅವರ ತಂದೆ ಇಟಲಿ ಸೈನ್ಯದಲ್ಲಿದ್ದರು. ಈ ವೇಳೆ ಸೈನ್ಯದ ಸೀಕ್ರೆಟ್ ಅನ್ನು ಸೋನಿಯಾ ದುರ್ಬಳಕೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಮದಾಸ್ ಹೇಳಿದ್ದರು ಎಂದು ಆರೋಪಿಸಲಾಗಿತ್ತು. ಹೀಗಾಗಿ ಎಲೆಕ್ಷನ್ ಸ್ಕ್ವಾಡ್ ನೀತಿ ಸಂಹಿತೆ ಉಲ್ಲಂಘನೆ ಅರೋಪದಡಿ ರಾಮದಾಸ್ ವಿರುದ್ದ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.
ಇಂದು ನ್ಯಾಯಾಲಯದಲ್ಲಿ ಆ ಪ್ರಕರಣ ವಿಚಾರಣೆ ನಡೆಯಿತು. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನಲೆ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರು ಅವರು ರಾಮದಾಸ್ರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ.