ಬೆಂಗಳೂರು: ಕನಕಪುರದ ಸಾತನೂರು ಬಳಿ ಅರಣ್ಯ ಭೂಮಿ ಒತ್ತುವರಿ ಪ್ರಕರಣ ಕುರಿತು ಸಂಸದ ಡಿ.ಕೆ.ಸುರೇಶ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಡಿ.ಕೆ.ಸುರೇಶ್ ವಿರುದ್ಧದ ಅರಣ್ಯ ಒತ್ತುವರಿ ಮಾಡಿ, ಗಣಿಗಾರಿಕೆ ಪ್ರಕರಣದ ಬಗ್ಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ನಡೆಯಿತು. ಕನಕಪುರ ತಾಲೂಕಿನ ಸಾತನೂರಿನ ಅರಣ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಿ, ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟು ಮಾಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕನಕಪುರದ ವಿಭಾಗದ ಅರಣ್ಯ ಅಧಿಕಾರಿಗಳು ದೂರು ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಕಲಂ 473ರ ಅಡಿ ಡಿ.ಕೆ.ಸುರೇಶ್ ಅವರನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.