ETV Bharat / state

ಉಚಿತ ಆರೋಗ್ಯ ಶಿಬಿರಗಳ ಮೇಲೆ ತಾತ್ಸಾರ ಸಲ್ಲದು: ಶಾಸಕ ಎಸ್.ಆರ್.ವಿಶ್ವನಾಥ್ - free health camp

ರಾಮಯ್ಯ ಐಎನ್‍ಡಿಐಸಿ ಆಸ್ಪತ್ರೆ, ರಂಗಲಕ್ಷ್ಮಿ ನೇತ್ರಾಲಯ, ಸ್ಪರ್ಷ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆ, ಶ್ರೀಕೃಷ್ಣದೇವರಾಯ ದಂತ ವಿಜ್ಞಾನ ಕಾಲೇಜುಗಳ ನುರಿತ ವೈದ್ಯರು ತಪಾಸಣೆಯಲ್ಲಿ ಭಾಗವಹಿಸಿದ್ದರು.  ಹೃದ್ರೋಗ, ಮಧುಮೇಹ, ರಕ್ತದೊತ್ತಡ ಚಿಕಿತ್ಸೆ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಸಾರ್ವಜನಿಕರು ತಪಾಸಣೆ ಮಾಡಿಸಿಕೊಂಡರು.

ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಶಾಸಕ ಎಸ್.ಆರ್.ವಿಶ್ವನಾಥ್.
author img

By

Published : Jun 17, 2019, 1:42 AM IST

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಾಗಿ ಪರಿಣಮಿಸಿದ್ದು, ಪ್ರತಿಯೊಬ್ಬರೂ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಶಾಸಕ ಎಸ್.ಆರ್.ವಿಶ್ವನಾಥ್.

ಯಲಹಂಕ ಉಪನಗರದ ಬಿಬಿಎಂಪಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ 4ನೇ ವರ್ಷದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಒತ್ತಡದ ಜೀವನದಿಂದಾಗಿ ಆಸ್ಪತ್ರೆಗೆ ತೆರಳಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅದರ ನಡುವೆಯೂ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಉಚಿತ ಆರೋಗ್ಯ ಶಿಬಿರ ಎಂದರೆ ತಾತ್ಸಾರ ಮನೋಭಾವ ತೋರಬಾರದು. ಇಂಥ ಆರೋಗ್ಯ ಶಿಬಿರಗಳು ನಡೆದಾಗ ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಯಲಹಂಕ ಉಪನಗರ ಬಿಬಿಎಂಪಿ ಸದಸ್ಯ ಎಂ. ಸತೀಶ್, ಮಾಜಿ ಸದಸ್ಯ ಎಂ. ಮುನಿರಾಜು, ಬಿಜೆಪಿ ಸ್ಲಂ ಮೋರ್ಚಾ ಅಧ್ಯಕ್ಷ ಎ.ಸಿ. ಮುನಿಕೃಷ್ಣಪ್ಪ, ಯಲಹಂಕ ಉಪನಗರ ವಾರ್ಡ್ ಬಿಜೆಪಿ ಅಧ್ಯಕ್ಷ ಎಸ್.ರಾಜಣ್ಣ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವೀಂದ್ರ, ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯ್‍ಕುಮಾರ್ ಇದ್ದರು.

Intro:ಸಂಜಯ್ ನಾಗ್ ಬೆಂಗಳೂರು, KA10014
**********""""""""""""""""""""
ಉತ್ತಮ ದೇಹಾರೋಗ್ಯ ಕಾಪಾಡಿಕೊಳ್ಳಿ: ಉಚಿತ ಆರೋಗ್ಯ ಶಿಬಿರದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಲಹೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದೇಹಾರೋಗ್ಯ ಕಾಪಾಡಿಕೊಳ್ಳುವುದು ಸವಾಲಾಗಿ ಪರಿಣಮಿಸಿದ್ದು, ಪ್ರತಿಯೊಬ್ಬ ನಾಗರಿಕನೂ ಸಹ ಬದುಕಿನಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ‌ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕೆಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಯಲಹಂಕ ಉಪನಗರದ ಬಿಬಿಎಂಪಿ ಕಚೇರಿ ಆವರಣದಲ್ಲಿ ರೋಟರಿ ಹೆರಿಟೇಜ್ ಎನ್.ಸಿ.ಸಿ. ಹಾಗೂ ವಿಶ್ವವಾಣಿ ಫೌಂಡೇಷನ್ ಸಹೋಗದಲ್ಲಿ ಆಯೋಜಿಸಿದ್ದ ನಾಲ್ಕನೆಯ ವರ್ಷದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು,ಉತ್ತಮ ಆರೋಗ್ಯ ಪ್ರತಿಯೊಬ್ಬ ನಾಗರಿಕರ ಆದ್ಯತೆಯಾಗಿರುತ್ತದೆ. ಆದರೆ ಇತ್ತೀಚಿನ ಒತ್ತಡದ ಜೀವನದಿಂದಾಗಿ ಜನತೆ ಆಸ್ಪತ್ರೆಗೆ ತೆರಳಿ ತಮ್ಮ ಆರೋಗ್ಯ ತಪಾಸಣೆ ಮಾಡಿಸುವ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಈ ಒತ್ತಡದ ನಡುವೆಯೂ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಅಗತ್ಯವಾಗಿದೆ ಎಂದರು.

ಆರೋಗ್ಯ ಶಿಬಿರದಲ್ಲಿ ರಾಮಯ್ಯ ಐಎನ್‍ಡಿಐಸಿ ಆಸ್ಪತ್ರೆ, ರಂಗಲಕ್ಷ್ಮಿ ನೇತ್ರಾಲಯ, ಸ್ಪರ್ಷ ಆಸ್ಪತ್ರೆ, ಮಣ ಪಾಲ್ ಆಸ್ಪತ್ರೆ, ಶ್ರೀಕೃಷ್ಣದೇವರಾಯ ದಂತ ವಿಜ್ಞಾನ ಕಾಲೇಜು ಮುಂತಾದ ಪ್ರಖ್ಯಾತ ಆಸ್ಪತ್ರೆಗಳ ತಜ್ಞ ವೈದ್ಯರಿಂದ ಇ.ಎನ್.ಟಿ. ಹೃದ್ರೋಗ, ಮಧುಮೇಹ, ರಕ್ತದೊತ್ತಡ, ದೇಹದಲ್ಲಿನ ಕೊಬ್ಬಿನ ಅಂಶ, ರಕ್ತಕಣಗಳು ಹೀಗೆ ವಿವಿಧ ಖಾಯಿಲೆಗಳ ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದರು.

Body:ಉಚಿತ ಆರೋಗ್ಯ ಶಿಬಿರ ಎಂದರೆ ಅನೇಕರಲ್ಲಿ ತಾತ್ಸಾರ ಮನೋಭಾವ ತೋರುತ್ತಾರೆ. ಆದರೆ ತಪಾಸಣೆಯ ವೇಳೆ ಹಲವು ಖಾಯಿಲೆಗಳಿರುವುದು ಬೆಳಕಿಗೆ ಬರುತ್ತದೆ. ಇದರಿಂದ ತಮಗಿರುವ ಖಾಯಿಲೆಗೆ ಚಿಕಿತ್ಸೆ ಪಡೆಯಲು ಹಾಗೂ ಜಾಗ್ರತೆ ವಹಿಸಲು ಅನುಕೂಲವಾಗುತ್ತದೆ. ಜನತೆಯ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ವಿಶ್ವವಾಣಿ ಫೌಂಡೇಷನ್ ವತಿಯಿಂದ ಕಳೆದ ನಾಲ್ಕು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುತ್ತಿದೆ. ಇದರಿಂದ ಸಹಸ್ರಾರು ಜನ ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ. ಇಂತಹ ಆರೋಗ್ಯ ಶಿಬಿರಗಳು ನಡೆದಾಗ ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.

Conclusion:ಕಾರ್ಯಕ್ರಮದಲ್ಲಿ ಯಲಹಂಕ ಉಪನಗರ ಬಿಬಿಎಂಪಿ ಸದಸ್ಯ ಎಂ.ಸತೀಶ್, ಮಾಜಿ ಸದಸ್ಯ ಎಂ.ಮುನಿರಾಜು, ಯಲಹಂಕ ನಗರ ಬಿಜೆಪಿ ಸ್ಲಂ ಮೋರ್ಚಾ ಅಧ್ಯಕ್ಷ ಎ.ಸಿ.ಮುನಿಕೃಷ್ಣಪ್ಪ, ಯಲಹಂಕ ಉಪನಗರ ವಾರ್ಡ್ ಬಿಜೆಪಿ ಅಧ್ಯಕ್ಷ ಎಸ್.ರಾಜಣ್ಣ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವೀಂದ್ರ (ಓಂ), ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯ್‍ಕುಮಾರ್, ಹಿರಿಯ ಬಿಜೆಪಿ ಮುಖಂಡರಾದ ಜಕ್ಕೂರು ದೇವರಾಜಪ್ಪ, ರೋಟರಿ ಹೆರಿಟೇಜ್ ಎನ್‍ಸಿಸಿ ಯ ಅರುಣ್ ಎ.ಗೋಪಾಲ್, ರಶ್ಮಿ ಟಂಕಸಾಲಿ ಸೇರಿದಂತೆ ಇನ್ನಿತರರಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.