ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ ಬಾವಾ ಅವರನ್ನು ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿನ ಮೈತ್ರಿ ಸರ್ಕಾರದಲ್ಲಿ ತಲೆದೂರಿರುವ ಅಸಮಧಾನ ಶಮನಕ್ಕೆ ಯತ್ನ ನಡೆಯುತ್ತಿರುವ ಬೆನ್ನಲ್ಲೇ ಖಾಲಿ ಇದ್ದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಜಿ.ಎ ಬಾವಾ ಅವರನ್ನು ನೇಮಿಸಲಾಗಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧಿನಿಯಮದ ಅನ್ವಯ, ಜಿ.ಎ ಬಾವಾ ಅವರನ್ನು ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮ ನಿರ್ದೇಶಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಅಕ್ರಂ ಭಾಷಾ ಆದೇಶಿಸಿದ್ದಾರೆ.