ETV Bharat / state

ಆರೋಗ್ಯ ಇಲಾಖೆಯಿಂದ ಬಡಜನರಿಗೆ ಉತ್ತಮ ಸೇವೆ: ಸಿಎಂ ಮೆಚ್ಚುಗೆ

author img

By

Published : May 30, 2019, 8:00 PM IST

ಬಡವರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಚಿಕಿತ್ಸೆಯನ್ನು ಒದಗಿಸುವ ನಿಟ್ಟಿನಲ್ಲಿ, ಸಂಜಯ್​ಗಾಂಧಿ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನ್ ಮಾಡ್ಯುಲರ್ ಶಸ್ತ್ರಚಿಕಿತ್ಸಾ ವಿಭಾಗಗಳನ್ನು ಸಿಎಂ ಕುಮಾರಸ್ವಾಮಿ ಉದ್ಘಾಟಿಸಿದರು. ಬಳಿಕ ಆರೋಗ್ಯ ಇಲಾಖೆ ಬಡ ಜನರಿಗಾಗಿ ಉತ್ತಮ ಸೇವೆ ಸಲ್ಲಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಡವರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ

ಬೆಂಗಳೂರು: ಆರೋಗ್ಯ ಇಲಾಖೆಯು ಬಡವರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಚಿಕಿತ್ಸೆಯನ್ನು ಒದಗಿಸಿಕೊಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಂಜಯಗಾಂಧಿ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನ್ ಮಾಡ್ಯುಲರ್ ಶಸ್ತ್ರಚಿಕಿತ್ಸಾ ವಿಭಾಗಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದಲ್ಲೂ 40 ಕೋಟಿ ರೂ. ವೆಚ್ಚದಲ್ಲಿ ಈ ಆಸ್ಪತ್ರೆ ಘಟಕ ನಿರ್ಮಿಸಲಾಗುವುದು. ಉತ್ತಮ ಚಿಕಿತ್ಸೆಗೆ ಬಡವರು ಸಾಲ ಮಾಡಬೇಕಾದ ಪರಿಸ್ಥಿತಿ ರಾಜ್ಯದಲ್ಲಿದೆ. ಇಂತಹ ಪರಿಸ್ಥಿತಿ ಬಡವರಿಗೆ ಬರಬಾರದು ಎಂಬುದು ನಮ್ಮಉದ್ದೇಶವಾಗಿದೆ. ಅಷ್ಟೇ ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತದೆ. ಸರ್ಕಾರಿ ಆಸ್ಪತ್ರೆಗಳ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಬೆಂಗಳೂರಿನ ನಾಲ್ಕು ಮೂಲೆಗಳಲ್ಲೂ 100 ರಿಂದ 150 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಹೈ-ಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮವಾದ ಚಿಕಿತ್ಸೆ ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ: ಸಿಎಂ

ಸಂಜಯ್ ಗಾಂಧಿ ಆಸ್ಪತ್ರೆಗೆ ಎಮ್ಆರ್​ಐ ಟ್ರಾಮಾ ಹಾಗೂ ಆರ್ಥೋಪೆಡಿಕ್ ಘಟಕಗಳು ಅತ್ಯಗತ್ಯ. ಈ ಮೊದಲು ರೋಗಿಗಳು ಹೊರಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು. ಇದರಿಂದ ಎಲ್ಲ ತಪಾಸಣೆ ಮತ್ತು ಪರೀಕ್ಷೆಗಳನ್ನು ಇಲ್ಲಿಯೇ ನಡೆಸಬಹುದು. ಇದು ಸುಲಭವಾಗಿ ಹಾಗೂ ಶೀಘ್ರವಾಗಿ ಕಾಯಿಲೆ ಬಗ್ಗೆ ನಿರ್ಧರಿಸಲು ಸಹಾಯಕವಾಗಲಿದೆ. ಈ ವ್ಯವಸ್ಥೆಗೆ ಬೇರೆ ಕಡೆಗಳಲ್ಲಿ ಸುಮಾರು 7 ಸಾವಿರ ರೂ. ಖರ್ಚಾಗುತ್ತಿತ್ತು. ಆದರೆ ಇಲ್ಲಿ ಮಾತ್ರ ಎಪಿಎಲ್ ಕಾರ್ಡ್​ ಹೊಂದಿದವರಿಗೆ ಕೇವಲ 2,650 ರೂ.ಗೆ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 1,300 ರೂ. ವೆಚ್ಚ ತಗುಲುತ್ತದೆ ಎಂದು ಸಿಎಂ ಸಂತಸ ವ್ಯಕ್ತಪಡಿಸಿದರು.

ನಿರ್ಗತಿಕರಿಗೆ ಉಚಿತ ತಪಾಸಣೆ ನಡೆಸಲಾಗುವುದು. ಅಷ್ಟೇ ಅಲ್ಲದೆ, ದೆಹಲಿಯ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಈ ಮಾದರಿ ವ್ಯವಸ್ಥೆ ಇದೆ. ಮೈತ್ರಿ ಸರ್ಕಾರದ ಅಧಿಕಾರಾವಧಿಯಲ್ಲಿ ಹೆಚ್ಚಿನ ಅಭಿವೃದ್ಧಿಯಾಗಿದೆ. ವೈದ್ಯರಿಗೆ ಪ್ರೋತ್ಸಾಹಧನ ನೀಡಬೇಕೆನ್ನುವ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಇದೇ ವೇಳೆ ಸಿಎಂ ಕುಮಾರಸ್ವಾಮಿ ನೀಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್​, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಎಂಎಲ್​ಸಿ ಭೋಜೇಗೌಡ ಉಪಸ್ಥಿತರಿದ್ದರು.

Intro:Body: ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಇಲಾಖೆ ಮೂಲಕ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಸಂಜಯಗಾಂಧಿ ಟ್ರಾಮಾ ಹಾಗೂ ಅಸ್ತಿ‌ ಆಸ್ಪತ್ರೆಯಲ್ಲಿ
ಎಂಆರ್ ಐ ಸ್ಕ್ಯಾನ್ ಮಾಡ್ಯುಲರ್ ಶಸ್ತ್ರಚಿಕಿತ್ಸಾ ವಿಭಾಗಗಳ ಉದ್ಘಾಟಿಸಿ ಮಾತನಾಡಿದ ಅವರು, ಬಡವರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರೆಕಿಸಿಕೊಡುವಲ್ಲಿ ಆರೋಗ್ಯ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಬಿಜಾಪುರದಲ್ಲೂ 40 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ಘಟಕ ನಿರ್ಮಿಸಲಾಗುವುದು.ಉತ್ತಮ ಚಿಕಿತ್ಸೆಗೆ ಬಡವರು ಸಾಲ ಮಾಡ್ಬೇಕಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.ಇಂಥಾ ಪರಿಸ್ಥಿತಿ ಬಡವರಿಗೆ ಬರಬಾರದು ಎಂಬುದು ನಮ್ಮಉದ್ದೇಶ.
ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತದೆ. ಸರ್ಕಾರಿ ಆಸ್ಪತ್ರೆಗಳ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಬೆಂಗಳೂರಿನ ನಾಲ್ಕು ಮೂಲೆಗಳಲ್ಲೂ 100 ರಿಂದ 150 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಹೈ ಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ.ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿವೇ ಎಂದರು.
ಸಂಜಯ್ ಗಾಂಧಿ ಆಸ್ಪತ್ರೆಗೆ ಎಮ್ ಆರ್ ಐ ಟ್ರಾಮಾ ಹಾಗೂ ಆರ್ಥೋಪೆಡಿಕ್ ಘಟಕಗಳು ಅತ್ಯಗತ್ಯ. ಈ ಮೊದಲು ರೋಗಿಗಳು ಹೊರಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು. ಇದರಿಂದ ಅಲ್ಟಿಮೇಟ್ ಇನ್ವೆಸ್ಟಿಗೇಷನ್ ನಡೆಸಬಹುದು. ಸುಲಭವಾಗಿ ಹಾಗೂ ಶೀಘ್ರವಾಗಿ ಡಿಸಿಷನ್ ಮೇಕಿಂಗ್ ಗೆ ಸಹಾಯಕವಾಗಲಿದೆ.
ಇದಕ್ಕೆ ಹೊರಗೆ 7 ಸಾವಿರ ರೂಪಾಯಿ ಖರ್ಚಾಗುತ್ತಿತ್ತು.
ಇಲ್ಲಿ, 2650 ರೂಗೆ ಎಪಿಎಲ್ ಹಾಗೂ 1300 ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ತಗುಲುವ ವೆಚ್ಚ. ನಿರ್ಗತಿಕರಿಗೆ ಉಚಿತ ತಪಾಸಣೆ ನೀಡಲಾಗುವುದು.
ದೆಹಲಿಯ ಸಫ್ಧರ್ ಜಂಗ್ ಆಸ್ಪತ್ರೆ ಈ ಮಾದರಿ ವ್ಯವಸ್ಥೆ ಇದೆ.
ಮೈತ್ರಿ ಸರ್ಕಾರದ ಅಧಿಕಾರಾವಧಿಯಲ್ಲಿ ಹೆಚ್ಚಿನಅಭಿವೃದ್ಧಿ ಯಾಗಿದೆ. ವೈದ್ಯರಿಗೆ ಇನ್ಸೆಂಟಿವ್ ನೀಡಬೇಕೆನ್ನುವ ಬೇಡಿಕೆಗೆ ಚಾಲನೆ ಕೊಡಲಿದ್ದೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ,ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಎಮ್ಮೆಲ್ಸಿ ಭೋಜೇಗೌಡ ಉಪಸ್ಥಿತರಿದ್ದರು.

.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.