ಬೆಂಗಳೂರು: ನಗರದ ಹಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಪರದಾಡುವಂತಾಯ್ತು.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದೆ ಎನ್ನಲಾಗಿದೆ. ವಾಯು ಮೇಲ್ಮೈ ಸುಳಿಯಿಂದ ಹವಾಮಾನ ವೈಪರಿತ್ಯವಾಗಿದೆ. ಹೀಗಾಗಿ ಬೆಂಗಳೂರು ನಗರದ ಮಲ್ಲೇಶ್ವರಂ, ನಾಗವಾರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಟ್ರಾಫಿಕ್ ಜಾಮ್ನಿಂದ ಜನ ಪರದಾಡುವಂತಾಯ್ತು.
ಇನ್ನು ಜೂನ್ 1ರಿಂದ ಮುಂಗಾರು ಮಳೆ ಆರಂಭವಾಗಲಿದ್ದು, ಮುಂಗಾರು ಆರಂಭಕ್ಕೂ ಮುನ್ನ ಹಲವೆಡೆ ಗುಡುಗು ಸಹಿತ ಮಳೆಯಾಗುವುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.