ಬೆಂಗಳೂರು: ಸಂಪುಟದಿಂದ ನನ್ನನ್ನು ಕೈ ಬಿಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ವಿಶ್ವನಾಥ್ ಅವರಿಗೆ ಮಂತ್ರಿ ಪದವಿ ನೀಡುವ ವಿಚಾರವೂ ತಿಳಿದಿಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುತ್ತಾರೆ ಎಂಬುದರ ಬಗ್ಗೆಯೂ ನನಗೆ ಗೊತ್ತಿಲ್ಲ. ಎಚ್.ವಿಶ್ವನಾಥ್ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಎಲ್ಲರೂ ಮನವಿ ಮಾಡಿದ್ದೇವೆ. ಈ ವಿಚಾರಗಳನ್ನು ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದ ಅವರು, ನಾಳೆ ಇಬ್ಬರು ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.