ಬೆಂಗಳೂರು: ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ. ನಾಗೇಂದ್ರ ಅವರನ್ನು ಪೊಲೀಸರ ವಶಕ್ಕೆ ನೀಡಿ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಾಸಕ ನಾಗೇಂದ್ರ ಈವರೆಗಿನ ವಿಚಾರಣೆ ವೇಳೆ ಗೈರು ಹಾಜರಾಗಿದ್ದರು. ಹೀಗಾಗಿ ಶಾಸಕ ನಾಗೇಂದ್ರ ವಿರುದ್ಧ ಕೋರ್ಟ್, ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು NBW ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್ಗೆ ಹಾಜರಾದ ವೇಳೆ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿದೆ. ಸದ್ಯ ಶಾಸಕ ಪೊಲೀಸರ ವಶದಲ್ಲಿದ್ದಾರೆ.
ಪ್ರಕರಣವೇನು...
ವೆಂಕಟೇಶ್ವರ ಟ್ರಾನ್ಸ್‌ಪೋರ್ಟ್ ಕಂಪನಿಯಿಂದ ₹ 50 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಣಿಕೆ ಮಾಡಿದ್ದ ಪ್ರಕರಣದಲ್ಲಿ ಶಾಸಕ ನಾಗೇಂದ್ರ ಆರೋಪಿಯಾಗಿದ್ದಾರೆ. ಈ ಸಂಬಂಧ ಸುಪ್ರೀಂಕೋರ್ಟ್ ಆದೇಶದ ಮೇಲೆ ಸಿಬಿಐ ಟೀಂ ತನಿಖೆ ನಡೆಸಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.