ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಪರ್ವ ಹಿನ್ನೆಲೆ ಮತ್ತೋರ್ವ ಜೆಡಿಎಸ್ ಶಾಸಕ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.
ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲವಂತೆ. ಇದರಿಂದ ಮೂವರು ಅತೃಪ್ತ ಜೆಡಿಎಸ್ ಶಾಸಕರ ಜೊತೆ ನಿಸರ್ಗ ಕೂಡ ಸೇರಿಕೊಂಡಿದ್ದಾರಾ ಅನ್ನೋ ಅನುಮಾನ ಮೂಡಿದೆ.
ಮೈತ್ರಿ ಸರ್ಕಾರದಲ್ಲಿ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಪಡೆದಿದ್ದರು. ನಂತರ ಕೇವಲ ಒಂದೂವರೆ ತಿಂಗಳಲ್ಲೇ ಈ ಸ್ಥಾನ ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯರ ಪಾಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ನಿಸರ್ಗ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.