ETV Bharat / state

ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವ ಸದಾನಂದಗೌಡ ಮತಯಾಚನೆ - ಮತಯಾಚನೆ

ಮಹಾಲಕ್ಷ್ಮೀ ಲೇಔಟ್​ನ ನಾಗಪುರ ವಾರ್ಡ್‍ನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಅವರು, ಐದು ಲಕ್ಷ ರೂಪಾಯಿವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕಳೆದ ಎರಡು ತಿಂಗಳಲ್ಲೇ 15 ಲಕ್ಷ ಜನರು ಆಯುಷ್ಮಾನ್ ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ಅಂಕಿ-ಅಂಶ ನೀಡಿದರು.

ಡಿವಿ ಸದಾನಂದಗೌಡ ಮತಯಾಚನೆ
author img

By

Published : Mar 28, 2019, 3:12 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಯೋಜನೆ ಬಡವರಿಗೆ ವರದಾನವಾಗಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಬಣ್ಣಿಸಿದರು.

ಮಹಾಲಕ್ಷ್ಮೀ ಲೇಔಟ್​ನ ನಾಗಪುರ ವಾರ್ಡ್‍ನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಅವರು, ಐದು ಲಕ್ಷ ರೂಪಾಯಿವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕಳೆದ ಎರಡು ತಿಂಗಳಲ್ಲೇ 15 ಲಕ್ಷ ಜನರು ಆಯುಷ್ಮಾನ್ ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ಅಂಕಿ-ಅಂಶ ನೀಡಿದರು.

ವ್ಯಕ್ತಿ ಆರೋಗ್ಯವಾಗಿದ್ದರೆ ಕುಟುಂಬ ಆರೋಗ್ಯವಾಗಿರುತ್ತದೆ. ಕುಟುಂಬ ಆರೋಗ್ಯವಾಗಿದ್ದರೆ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಸ್ವಾಸ್ಥ್ಯ ಸಮಾಜದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂಬುದು ಮೋದಿಯವರ ದೂರದೃಷ್ಟಿಯಾಗಿದೆ ಎಂದು ವಿವರಿಸಿದರು.

ದೇಶ ಪ್ರಥಮ ಎಂಬುದು ಮೋದಿಯವರ ತತ್ವವಾಗಿದೆ. ಹೊಸ ತಂತ್ರಜ್ಞಾನದ ಮೂಲಕ 300 ಕಿ.ಮೀ. ಎತ್ತರದಲ್ಲಿದ್ದ ಗೂಢಚಾರ್ಯ ಉಪಗ್ರಹವನ್ನು ಉರುಳಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಹಿಂದೆಲ್ಲ ವಿದೇಶದಲ್ಲಿ ಭಾರತೀಯರನ್ನು ಉದಾಸೀನ ಮಾಡಲಾಗುತ್ತಿತ್ತು. ಆದರೆ ಮೋದಿಯವರ ದಕ್ಷ ಆಡಳಿತದಿಂದಾಗಿ ಈಗ ಗೌರವದಿಂದ ಕಾಣಲಾಗುತ್ತಿದೆ ಎಂದು ವಿವರಿಸಿದರು.

2004 ರಿಂದ 2014 ರವರೆಗೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಆಡಳಿತದಲ್ಲಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು ಕೇಂದ್ರವು 74.5 ಸಾವಿರ ಕೋಟಿ ರೂಪಾಯಿಯನ್ನು ಮಾತ್ರ ರಾಜ್ಯಕ್ಕೆ ನೀಡಿತ್ತು. ಆದರೆ ಮೋದಿಯವರು 2014-2019 ರ ಅವಧಿಯಲ್ಲಿ ರಾಜ್ಯಕ್ಕೆ 2.42 ಲಕ್ಷ ಕೋಟಿ ರೂ. ನೀಡಿದ್ದಾರೆ. ಎಲ್ಲ ರಾಜ್ಯಗಳ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬುದು ಮೋದಿಯವರ ಅಭಿವೃದ್ಧಿ ಮಂತ್ರವಾಗಿತ್ತು. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರನ್ನೂ ಸಮಾನವಾಗಿ ಕಂಡಿದ್ದಾರೆ ಎಂದು ವ್ಯಾಖ್ಯಾನಿಸಿದರು.

ಹಗರಣಮುಕ್ತ ಆಡಳಿತ
ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಎಲ್ಲೆಡೆಯೂ ಭ್ರಷ್ಟಾಚಾರವೇ ತುಂಬಿತ್ತು. ಕಲ್ಲಿದ್ದಲು ಹಂಚಿಕೆ, ಹೆಲಿಕಾಫ್ಟರ್ ಖರೀದಿ, ತರಂಗಗುಚ್ಛ ಹರಾಜು, ಕಾಮನ್ವೆಲ್ತ್ ಗೇಮ್ಸ್ ಗುತ್ತಿಗೆ ಕಾಮಗಾರಿ, ಆದರ್ಶ ಹೌಸಿಂಗ್ ಸೊಸೈಟಿ ಸೇರಿದಂತೆ ಹಲವು ಹಗರಣಗಳು ನಡೆದಿವೆ. ಆದರೆ ಮೋದಿಯವರ ಆಡಳಿತ ಹಗರಣ ಮುಕ್ತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆಸ್ಪತ್ರೆಗೆ ಭೇಟಿ

ನಂತರ ಸದಾನಂದಗೌಡ ಅವರು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ,ಬಿಎಂಟಿಸಿ ಬಸ್ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಮನವಿ ಮಾಡಿದರು.ತದನಂತರ ಸದಾನಂದಗೌಡ ಮಹಾಲಕ್ಷ್ಮೀಪುರ, ಶಂಕರಮಠ ಮತ್ತಿತರ ಕಡೆ ಚುನಾವಣಾ ಪ್ರಚಾರ ಸಭೆ ನಡೆಸಿ ಮತ ಯಾಚಿಸಿದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.