ಬೆಂಗಳೂರು: ಸ್ಪೀಕರ್ ಅವರ ತೀರ್ಮಾನದ ಮೇರೆಗೆ ಸದನದಲ್ಲಿ ವಿಶ್ವಾಸಮತದ ಕುರಿತು ಮಾತ್ರ ಚರ್ಚೆ ನಡೆಯುತ್ತಿದ್ದು, ಬೇರೆ ವಿಷಯಗಳು ಚರ್ಚೆಯಾಗಿಲ್ಲ. ಮೈತ್ರಿ ಸರ್ಕಾರದ ಸದಸ್ಯರಿಗೆ ಸಂಜೆಯೊಳಗೆ ಬಹುಮತ ಸಾಬೀತು ಪಡಿಸಲು ಅವಕಾಶ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.
ಮೇಲ್ಮನೆ ಕಲಾಪ ಮುಂದೂಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ಪಕ್ಷಕ್ಕೆ ಬಹುಮತ ಇಲ್ಲದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹಾಗಾಗಿ ಕಲಾಪ ಮುಂದೂಡಿಕೊಂಡು ಹೋಗುತ್ತಿದ್ದಾರೆ. ಸ್ಪೀಕರ್ ಕೂಡಾ ಪಾರಾಯಣ ಸೂತ್ರ ಅನುಸರಿಸಿ ವಿಳಂಬ ಮಾಡುತ್ತಿದ್ದಾರೆ ಎಂದು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಬಹುಮತ ಸಾಬೀತುಪಡಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದೇವೆ. ಇದಕ್ಕೆ ಸ್ವೀಕರ್ ಅನುಮತಿ ಕೊಡಬೇಕು ಎಂದು ಒತ್ತಾಯಿಸಿದರು.