ETV Bharat / state

ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಿರುವುದು ಪಕ್ಷದ ಕಾರ್ಯಕರ್ತರಿಗೆ ಇಷ್ಟವಿಲ್ಲ: ಕೃಷ್ಣಬೈರೇಗೌಡ ​​​​​​​ - ಕೃಷ್ಣ ಬೈರೇಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕೃಷ್ಣ ಬೈರೇಗೌಡ ಸ್ಫರ್ಧೆ. ಮೈತ್ರಿ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಸಭೆ ನಡೆಸಿದ ಬೈರೇಗೌಡ. ವರಿಷ್ಠರ ತೀರ್ಮಾನದಂತೆ ಚುನಾವಣೆಗೆ ಸ್ಪರ್ಧಿಸಿರೋದಾಗಿ ಹೇಳಿಕೆ.

ಕಾರ್ಯಕರ್ತರ ಸಭೆಯಲ್ಲಿ ಕೃಷ್ಣಬೈರೇಗೌಡ ​​​​​​​
author img

By

Published : Apr 3, 2019, 3:23 AM IST

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ನಾನು ಶಾಸಕನಾಗಿ ಆಯ್ಕೆಯಾಗಿರುವಬ್ಯಾಟರಾಯನಪುರದ ಮುಖಂಡರು ಹಾಗೂಪಕ್ಷದ ಕಾರ್ಯಕರ್ತರಿಗೆ ಇಷ್ಟವಿಲ್ಲ ಎಂದು ಕೃಷ್ಣಬೈರೇಗೌಡ ಹೇಳಿದ್ದಾರೆ.

ಬ್ಯಾಟರಾಯನಪುರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ - ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಕೃಷ್ಣಬೈರೇಗೌಡ, ನಾನು ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸಿರುವುದು ನನ್ನ ಸ್ವಕ್ಷೇತ್ರ ಬ್ಯಾಟರಾಯನಪುರ ಕ್ಷೇತ್ರದ ಮುಖಂಡರಿಗೆ ಈಗಲೂ ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾರೆ.

ನನಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಂಬುದು ಗೊತ್ತಿರಲಿಲ್ಲ. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರ ತೀರ್ಮಾನದಂತೆ ಕೊನೆ ಗಳಿಗೆಯಲ್ಲಿ ಚುನಾವಣೆಗೆ ಸ್ಫರ್ಧಿಸಬೇಕಾಯಿತು. ಹೀಗಾಗಿ, ನನ್ನ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಕೇಳಲು ಸಾಧ್ಯವಾಗಲಿಲ್ಲ. ಈಗ ಸಮಸ್ಯೆ ಏನಾಗಿದೆ ಎಂದರೆ, ನಮ್ಮ ಕ್ಷೇತ್ರದ ಮುಖಂಡರು ಮನೆ ಬಳಿ ಬಂದು ಹಾಗೂ ಇನ್ನು ಕೆಲವರು ಕರೆ ಮಾಡಿ ನೀವು ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸಿರುವುದು ನಮಗೆ ಇಷ್ಟವಿಲ್ಲ. ನೀವು ನಮ್ಮ ಕ್ಷೇತ್ರದ ಶಾಸಕರಾಗಿ ರಾಜ್ಯದ ಮಂತ್ರಿಗಳಾಗಿಯೇ ಇರಬೇಕೆಂದು ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕರ್ತರ ಸಭೆಯಲ್ಲಿ ಕೃಷ್ಣಬೈರೇಗೌಡ​​​​​​​

ಕ್ಷೇತ್ರದ ಜನತೆ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮನದಿಂಗಿತ ನನಗೆ ಅರ್ಥವಾಗುತ್ತದೆ. ಆದರೆ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎಲ್ಲರು ಬದ್ಧರಾಗಿರಬೇಕು. ಚುನಾವಣೆಗೆ ಸ್ಫರ್ಧಿಸುವ ಮುಂಚೆ ಈ ರೀತಿ ಯೋಚಿಸಬಹುದಿತ್ತು. ಆದರೀಗ ಚುನಾವಣೆ ಅಖಾಡಕ್ಕೆ ಇಳಿದಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯ ಹೆಬ್ಬಾಳ, ಪುಲಿಕೇಶಿನಗರ, ಕೆ.ಆರ್.ಪುರಂ, ಮಹಾಲಕ್ಷ್ಮಿ ಬಡಾವಣೆಯಲ್ಲಿ ಬಹಳ ಹುಮ್ಮಸ್ಸಿನಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಅವರಂತೆ ಬ್ಯಾಟರಾಯನಪುರ ಕ್ಷೇತ್ರದ ನಮ್ಮ ಮುಖಂಡರು ಕಾರ್ಯಕರ್ತರು ಕೂಡಾ ಬಿರುಸಿನ ಪ್ರಚಾರ ಮಾಡಬೇಕೆಂದು ಕರೆ ನೀಡಿದರು.

ಸಮಯದ ಅಭಾವದಿಂದಾಗಿ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಾದ್ಯಂತ ಸಂಚರಿಸಿ ಮತಯಾಚನೆ ಮಾಡಲು ಸಾಧ್ಯವಾಗದಿರಬಹುದು. ಚುನಾವಣೆಯಲ್ಲಿ ಅತ್ಯಧಿಕ ಬಹುಮತದಿಂದ ಗೆಲುವು ಸಾಧಿಸಬೇಕಾದರೆ, ನನ್ನ ಅನುಪಸ್ಥಿತಿಯಲ್ಲಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಒಮ್ಮತದಿಂದ ಪ್ರಚಾರ ನಡೆಸಿ ಮತದಾರರ ಮನವೊಲಿಸಬೇಕೆಂದು ಮನವಿ ಮಾಡಿದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.