ಬೆಂಗಳೂರು: ಭಾರಿ ಕುತೂಹಲ ಮೂಡಿಸಿರುವ ಲೋಕಸಭಾ ಚುನಾವಣಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಾಧ್ಯಮ ಕೇಂದ್ರವನ್ನ ಉದ್ಘಾಟಿಸಲಾಯಿತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಮಾಧ್ಯಮ ಕೇಂದ್ರವನ್ನ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತಾನಾಡಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶವನ್ನು ನೀಡಲು ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇಲ್ಲಿ 30 ಗಣಕಯಂತ್ರ ಸೇರಿದಂತೆ ಎಲ್ಇಡಿ ಸ್ಕ್ರೀನ್ಗಳನ್ನು ಹಾಕಲಾಗಿದೆ. ಪ್ರತಿ ಜಿಲ್ಲೆಗಳಿಂದಲೂ ಇಲ್ಲಿಯೇ ನೇರವಾಗಿ ಮಾಹಿತಿ ದೊರೆಯುತ್ತದೆ. ಮಾಧ್ಯಮ ಹಾಗೂ ಗಣ್ಯ ವ್ಯಕ್ತಿಗಳು ಚುನಾವಣಾ ಫಲಿತಾಂಶದ ಮಾಹಿತಿಯನ್ನು ಇಲ್ಲಿ ಪಡೆಯಬಹುದು ಎಂದು ತಿಳಿಸಿದರು.
ಬೆಳಿಗೆ 7 ರಿಂದ ಎಲ್ಲಾ ಚಟುವಟಿಕೆಗಳು ಪ್ರಾರಂಭವಾಗಲಿದ್ದು, ನಾಳೆಯ ಫಲಿತಾಂಶದ ಬಗ್ಗೆ ಮಾಧ್ಯಮ ಕೇಂದ್ರದಲ್ಲಿ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತದೆ.