ಬೆಂಗಳೂರು: ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಪಷ್ಟೀಕರಣ ನೀಡಿದ್ದಾರೆ.
ಬಸ್ ಪ್ರಯಾಣ ದರ ಶೇ.20ರಷ್ಟು ಏರಿಕೆಯಾಗುವುದಾಗಿ ಸುದ್ದಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರ. ಅಂತಹ ಯಾವುದೇ ತೀರ್ಮಾನವನ್ನು ಸಾರಿಗೆ ಇಲಾಖೆ, ಸರ್ಕಾರ ತೆಗೆದುಕೊಂಡಿಲ್ಲ. ಅಲ್ಲದೆ ಈ ವಿಷಯವೇ ನಮ್ಮ ಮುಂದೆ ಚರ್ಚೆಯಾಗಿರುವುದಿಲ್ಲ ಎಂದು ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಕೆಎಸ್ಆರ್‌ಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇರುವ ಪ್ರಯಾಣ ದರವೇ ಅನ್ವಯಿಸುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದ್ದಾರೆ.