ಬೆಂಗಳೂರು: ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದಿಂದ ಸದ್ಯಕ್ಕೆ ಆತಂಕ ಬೇಡ. ಜಲಾಶಯದಲ್ಲಿ ಒಳಹರಿವು ಹೆಚ್ಚು ಇದ್ದಾಗ ಮಾತ್ರ ನೀರು ಬಿಡುವಂತೆ ಸ್ಪಷ್ಟವಾಗಿ ಹೇಳಲಾಗಿದೆ ಎಂದರು.
ಮಳೆ ಬಂದು ಒಳಹರಿವು ಹೆಚ್ಚಾದಾಗ ಮಾತ್ರ ನೀರು ಬಿಡಲು ಅಭ್ಯಂತರ ಇಲ್ಲ, ಹೀಗಾಗಿ ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯ ಇಲ್ಲ ಎಂದರು.