ಬೆಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದವನನ್ನು ತನ್ನ ಸ್ನೇಹಿತರೆ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೊಟ್ಟಿಗೆರೆಯ ರಾಮು(28) ಕೊಲೆಯಾದ ದುರ್ದೈವಿ. ನಗರದ ಗೊಟ್ಟಿಗೆರೆ ಬಳಿಯ ಕೊತ್ತನೂರು ಕೆರೆ ಬಳಿ ರಾಮುನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದೆ. ಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರು, ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ನಿಖರವಾಗಿ ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಇನ್ನೂ ತಿಳಿದಿಲ್ಲ. ಮೇಲ್ನೋಟಕ್ಕೆ ವೃತ್ತಿ ವೈಷಮ್ಯದಿಂದ ಆರೋಪಿಗಳು ಕೊಲೆ ಮಾಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.