ಬೆಂಗಳೂರು: ಮಧ್ಯರಾತ್ರಿ ವೇಳೆ ನಗರದ ಅಪಾರ್ಟ್‌ಮೆಂಟ್‌ವೊಂದರ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಆರ್‌ಎಕ್ಸ್ 100 ಬೈಕ್ ಕಳ್ಳತನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಏ. 29ರ ತಡರಾತ್ರಿ ಇಬ್ಬರು ಕಳ್ಳರು ಮತ್ತಿಕೆರೆಯ ಅಪಾರ್ಟ್‌ಮೆಂಟ್‌ವೊಂದರ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಟೆಕ್ಕಿ ಅಭಿಷೇಕ್ ಎಂಬಾತನ ಆರ್‌ಎಕ್ಸ್ 100 ಬೈಕ್ ಕಳ್ಳತನ ಮಾಡಿದ್ದಾರೆ.
ಕಳ್ಳತನದ ದೃಶ್ಯಗಳು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಪೊಲೀಸರು ವಶಪಡಿಸಿಕೊಂಡು ಪತ್ತೆ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.