ಬೆಂಗಳೂರು: ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ಬೆಂಗಳೂರಿಗೆ ಆಗಮಿಸಿದ್ದು, ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಇಂದು ರಾತ್ರಿ ಮಹತ್ವದ ಸಭೆ ನಡೆಸಲಿದ್ದಾರೆ.
ಇದಕ್ಕೂ ಮುನ್ನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತಿರುವ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆ ಮತ್ತು ಮೈತ್ರಿ ಮುಂದುವರಿಸಬೇಕೆ?, ಬೇಡವೇ? ಎಂಬುದರ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ನಂತರ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಲಿದ್ದು, ಡಿಸಿಎಂ ಡಾ. ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.