ಬೆಂಗಳೂರು: ನನ್ನ ವೈಯಕ್ತಿಕ ವಿಚಾರಗಳನ್ನು ಗಮನಕ್ಕೆ ತರದೇ ಮಾಧ್ಯಮದವರ ಮುಂದಿಟ್ಟಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ವಿರುದ್ಧ ಡಾ. ಸೋಮ್ ದತ್ತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಗತ್ಯ ಬಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಕೆಪಿಸಿಸಿ ಮಹಿಳಾ ಘಟಕದ ಸದಸ್ಯರ ಜತೆ ಬ್ರಿಜೇಶ್ ಕಾಳಪ್ಪ ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ಸಂದರ್ಭ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಆರೋಪ ಮಾಡುವ ಸಂದರ್ಭದಲ್ಲಿ ಡಾ. ಸೋಮ್ ದತ್ತಾ ಅಪರಿಚಿತ ವ್ಯಕ್ತಿ ಜತೆ 14 ನಿಮಿಷ ಮಾತನಾಡಿದ್ದ ಆಡಿಯೋ ಟೇಪ್ ಬಿಡುಗಡೆ ಮಾಡಿದ್ದರು. ಟೇಪ್ ಬಿಡುಗಡೆಯಾದ ಕೆಲವೇ ಸಮಯದಲ್ಲಿ ಸುದ್ದಿಗೋಷ್ಠಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸೋಮ್ ದತ್ತಾ, ಟ್ವಿಟರ್ ಮೂಲಕ ಬ್ರಜೇಶ್ ಕಾಳಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ರಾಜಕೀಯ ಲಾಭಕ್ಕಾಗಿ ಮಹಿಳೆಯರ ಗೌರವ, ಘನತೆಗೆ ಧಕ್ಕೆ ತರುತ್ತಿರುವ ಬ್ರಿಜೇಶ್ ಕಾಳಪ್ಪಗೆ ನಾಚಿಕೆಯಾಗಬೇಕು ಎಂದು ಟೀಕಿಸಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಗೌರವ ಹಾಗೂ ಘನತೆಗೆ ಧಕ್ಕೆ ತಂದಿರುವ ಬ್ರಿಜೇಶ್ ಕಾಳಪ್ಪ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಕೂಡ ತಿಳಿಸಿದ್ದಾರೆ.