ಬೆಂಗಳೂರು: ಜೂನ್ 2019ರ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಹಾಜರಾಜುವ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಮಂಡಳಿ ವೆಬ್ಸೈಟ್ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ಸಂಬಂಧಿಸಿದ ಶಾಲೆಯವರು ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
www.kseeb.kar.nic.in ನಲ್ಲಿ ಮಾಹಿತಿ ಲಭ್ಯವಿದ್ದು, ಇಂದಿನಿಂದ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಜೂನ್ 21ರಿಂದ 28ರವರೆಗೆ ನಡೆಯುವ ಪೂರಕ ಪರೀಕ್ಷೆಗೆ ಸಂಬಂಧಿಸಿದಂತೆ ಶಾಲೆಗಳ ಮುಖ್ಯೋಪಾಧ್ಯಾಯರ ಸಂದೇಹಗಳಿಗೆ ಉತ್ತರಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ.
ಈ ವ್ಯವಸ್ಥೆಯನ್ನ ಶಾಲಾ ಮುಖ್ಯೋಪಾಧ್ಯಾಯರು, ಪೋಷಕರು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಲ್ಪ್ ಲೈನ್ ನಂಬರ್- 080-23310075//76.