ಬೆಂಗಳೂರು: ಬೈಕ್‌ಗಳಲ್ಲಿ ಬಂದು ಮಹಿಳೆಯರ ಚಿನ್ನಾಭರಣ ದೋಚುತ್ತಿದ್ದ ಇರಾನಿ ಗ್ಯಾಂಗ್‌ನ ಕುಖ್ಯಾತ ಸರಗಳ್ಳರಿಬ್ಬರನ್ನು ಬಂಧಿಸುವಲ್ಲಿ ವಿದ್ಯಾರಣ್ಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಮದ್ ಅಲಿ ಅಲಿಯಾಸ್ ಮಹಮದ್ ಬಿನ್ ಹಾಗೂ ಸೈಯದ್ ಕರಾರ್ ಹುಸೈನ್ ಇಬ್ಬರು ಬಂಧಿತ ಆರೋಪಿಗಳು.
ಬಂಧಿತರಿಂದ 18 ಲಕ್ಷ ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಬೈಕ್ ಹಾಗು ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಬಂಧನದಿಂದ 20 ಸರ ಅಪಹರಣ ಪ್ರಕರಣಗಳು ಪತ್ತೆಯಾಗಿವೆ.