ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದ್ದು, ಮಧ್ಯಾಹ್ನ 12 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಈ ಬಾರಿ 15 ದಿನಗಳ ಮುನ್ನವೇ ಫಲಿತಾಂಶ ಪ್ರಕಟಿಸಲಾಗುತ್ತಿದೆ. ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಸಿಇಟಿಗೂ ಮೊದಲೇ ಪಿಯು ಫಲಿತಾಂಶ ಪ್ರಕಟಿಸಲಾಗುತ್ತಿದೆ.
ಈ ಬಾರಿ ಆಯಾ ಮೌಲ್ಯಮಾಪನ ಕೇಂದ್ರಗಳಿಂದಲೇ ಮೌಲ್ಯಮಾಪಕರು ಆನ್ಲೈನ್ನಲ್ಲಿ ಅಂಕಗಳನ್ನು ಅಪ್ಲೋಡ್ ಮಾಡಿದ್ದರಿಂದ ಮೌಲ್ಯಮಾಪನ ಪ್ರಕ್ರಿಯೆ ಬೇಗ ಮುಗಿದಿದೆ. ಇಂದು ಮಧ್ಯಾಹ್ನ 12 ಗಂಟೆಯ ನಂತರ ww.pue.kar.nic.in ಹಾಗೂ www.karresulte.nic.in ಎಂಬ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಿರಲಿದೆ.
ಇನ್ನು ಏ. 16 ರಂದು ಆಯಾ ಪದವಿ ಪೂರ್ವ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.