ETV Bharat / state

ನಾಳೆ ಅನೌಪಚಾರಿಕ ಸಂಪುಟ ಸಭೆ ನಡೆಸಲಿರುವ ಸಿಎಂ ಹೆಚ್​ಡಿಕೆ - ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಲೋಕಸಭೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಳೆ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ.

ನಾಳೆ ಅನೌಪಚಾರಿಕ ಸಂಪುಟ ಸಭೆ ನಡೆಸಲಿರುವ ಸಿಎಂ
author img

By

Published : May 23, 2019, 9:38 PM IST

ಬೆಂಗಳೂರು:
ಲೋಕಸಭೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಳೆ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ.

ಸಚಿವ ಸಂಪುಟ ಸಭೆ ನಂತರ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಸಂಜೆ 4.30ಕ್ಕೆ ನಡೆಯುವ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಫಲಿತಾಂಶದಿಂದ ಸರ್ಕಾರದ ಮೇಲೆ ಆಗಬಹುದಾದ ಪರಿಣಾಮ, ಮೈತ್ರಿ ಕಾರಣದಿಂದಾಗಿಯೇ ಜೆಡಿಎಸ್ ಪಕ್ಷಕ್ಕೆ ಹಿನ್ನಡೆ ಆಯ್ತಾ ಎಂಬುದರ ಚರ್ಚೆ, ಸರ್ಕಾರಕ್ಕೆ ಎರಡು ದಿನಗಳ ಕಾಲ ಡೆಡ್ ಲೈನ್ ಕೊಟ್ಟಿರುವ ಯಡಿಯೂರಪ್ಪ ಹೇಳಿಕೆ ಬಗ್ಗೆ ಚರ್ಚೆ, ಈ ಬೆಳವಣಿಗೆಯಿಂದ ಅಸಮಾಧಾನಗೊಂಡ ಶಾಸಕರನ್ನು ನಿಯಂತ್ರಿಸುವುದು, ಸರ್ಕಾರವನ್ನು ಉಳಿಸಿಕೊಳ್ಳಲು ಅನುಸರಿಸಬೇಕಾದ ತಂತ್ರ ಸೇರಿದಂತೆ ಅನೇಕ ವಿಚಾರಗಳ ಕುರಿತು ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

Intro:ಬೆಂಗಳೂರು : ಲೋಕಸಭೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. Body:ಸಚಿವ ಸಂಪುಟ ಸಭೆ ನಂತರ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಸಂಜೆ 4.30 ಕ್ಕೆ ನಡೆಯುವ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ
ಫಲಿತಾಂಶ ದಿಂದ ಸರ್ಕಾರದ ಮೇಲೆ ಆಗಬಹುದಾದ ಪರಿಣಾಮ, ಮೈತ್ರಿ ಕಾರಣದಿಂದಾಗಿಯೇ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಯ್ತಾ ಎಂಬ ಬಗ್ಗೆ ಚರ್ಚೆ, ಸರ್ಕಾರಕ್ಕೆ ಎರಡು ದಿನಗಳ ಕಾಲ ಡೆಡ್ ಲೈನ್ ಕೊಟ್ಟಿರುವ ಯಡಿಯೂರಪ್ಪ ಹೇಳಿಕೆ ಬಗ್ಗೆ ಚರ್ಚೆ ಸೇರಿದಂತೆ ಈ ಬೆಳವಣಿಗೆಯಿಂದ ಅಸಮಾಧಾನಗೊಂಡ ಶಾಸಕರನ್ನು ನಿಯಂತ್ರಿಸುವುದು, ಸರ್ಕಾರವನ್ನು ಉಳಿಸಿಕೊಳ್ಳಲು ಅನುಸರಿಸಬೇಕಾದ ತಂತ್ರ
ಈ ವಿಚಾರಗಳ ಕುರಿತು ನಾಯಕರು ಮಾತುಕತೆ ನಡೆಸಲಿದ್ದಾರೆ.
ಇದರ ಜೊತೆಗೆ ಸೋಲಿನಿಂದ ಕಂಗೆಡಬೇಡಿ ಎಂದು ನಾಯಕರು ಧೈರ್ಯ ತುಂಬಲಿದ್ದಾರೆ ಎನ್ನಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.