ದೊಡ್ಡಬಳ್ಳಾಪುರ: ಅನುಮಾನಾಸ್ಪದ ರೀತಿ ಅರೆಬೆತ್ತಲೆ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ನೆಲಮಂಗಲ-ದೊಡ್ಡಬಳ್ಳಾಪುರ ರಸ್ತೆಯ ಗುಟ್ಟೆವೇಣುಗೋಪಾಲ ಸ್ವಾಮಿ ದೇವಸ್ಥಾನದ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಅಪರಿಚಿತ ಮಹಿಳೆಯ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೇಲ್ನೋಟಕ್ಕೆ ಕೊಲೆ ಮಾಡಿ ಅರಣ್ಯದಲ್ಲಿ ಶವವನ್ನು ಬಿಸಾಕಿರುವ ಸಂಶಯ ವ್ಯಕ್ತವಾಗಿದೆ. ಶವದ ಪಕ್ಕದಲ್ಲಿ ಮಕ್ಕಳಿಗೆ ಹಾಕುವ ಡೈಪರ್ಗಳು ಸಹ ಸಿಕ್ಕಿವೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ಮಹಿಳೆಗೆ ಸಂಬಂಧಪಟ್ಟವರು ದೊಡ್ಡಬಳ್ಳಾಪುರ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.