ETV Bharat / state

ಕೋವಿಡ್‌ 3ನೇ ಅಲೆ ತಡೆಗೆ ಚಾಮರಾಜನಗರದಲ್ಲಿ‌ ಸಕಲ ತಯಾರಿ

author img

By

Published : Jul 22, 2021, 2:37 PM IST

ಎರಡನೇ ಅಲೆಯಲ್ಲಿ ಆದ ಅಚಾತುರ್ಯಗಳು ಮೂರನೇ ಅಲೆಯಲ್ಲಿ ನಡೆಯದಂತೆ ಜಿಲ್ಲಾಡಳಿತ ನಿಗಾ ವಹಿಸಿದೆ. ಚಾಮರಾಜನಗರದ ಹೊರವಲಯದಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 120 ಬೆಡ್‌ ಹಾಗೂ ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಆಮ್ಲಜನಕಯುಕ್ತ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ.

Chamarajanagar
ಚಾಮರಾಜನಗರ

ಚಾಮರಾಜನಗರ: ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ತಜ್ಞರ ಮುನ್ಸೂಚನೆ ನೀಡಿದ್ದು ಮಕ್ಕಳ ಆರೋಗ್ಯದ ರಕ್ಷಣೆಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮಕ್ಕಳ ಚಿಕಿತ್ಸೆಗಾಗಿ ಪ್ರತ್ಯೇಕವಾಗಿ ಚಾಮರಾಜನಗರದ ಹೊರವಲಯದಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 120 ಬೆಡ್‌ ಹಾಗೂ ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಆಮ್ಲಜನಕಯುಕ್ತ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಆಸ್ಪತ್ರೆಗಳಲ್ಲಿ ಮಕ್ಕಳ ವೆಂಟಿಲೇಟರ್‌, ಹಸುಗೂಸುಗಳ (ನಿಯೋನೆಂಟಲ್‌) ವೆಂಟಿಲೇಟರ್‌ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ.

3ನೇ ಅಲೆ ತಯಾರಿ ಕುರಿತು ಮಾಹಿತಿ ನೀಡಿದ ಎಂ.ಆರ್.ರವಿ

ಚಾಮರಾಜನಗರ ಮೆಡಿಕಲ್‌ ಕಾಲೇಜಿನಲ್ಲಿ 100 ಆಮ್ಲಜನಕಯುಕ್ತ ಬೆಡ್‌, 10 ಎನ್‌ಐಸಿಯು, ಪಿಎಸಿಯು, ವೆಂಟಿಲೇಟರ್‌ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಮಗುವಿನ ಜತೆ ತಾಯಿ ಅಥವಾ ತಂದೆ ಉಳಿದುಕೊಂಡರೆ ಹೇಗೆಲ್ಲಾ ಚಿಕಿತ್ಸೆ ನೀಡಬೇಕು ಎಂದು ತಜ್ಞ ವೈದ್ಯರು ತರಬೇತಿ ನೀಡಲಿದ್ದಾರೆ ಎಂದು ಚಾಮರಾಜನಗರ ಡಿಸಿ ಡಾ.ಎಂ.ಆರ್.ರವಿ ಈಟಿವಿ ಭಾರತಕ್ಕೆ ತಿಳಿಸಿದರು.

ಸಿಬ್ಬಂದಿಗೆ ತರಬೇತಿ:

ಜಿಲ್ಲೆಯ 380 ಜನ ಮೆಂಟರ್‌ಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ನಮ್ಮಲ್ಲಿ ಸಾಕಷ್ಟು ಮಾನವ ಸಂಪನ್ಮೂಲವಿದೆ. ಆದರೆ ಅವರಿಗೆ ಕೋವಿಡ್‌ ನಿರ್ವಹಣೆ ಕುರಿತು ಸರಿಯಾದ ತರಬೇತಿ ಇಲ್ಲ. ಹಾಗಾಗಿ ವೈದ್ಯರು ಹಾಗೂ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಗ್ರಾಪಂ ನೌಕರರಿಗೆ ಈಗಾಗಲೇ ಮಕ್ಕಳ ತಜ್ಞ ವೈದ್ಯರಿಂದ ತರಬೇತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ, ಕೆಕ್ಕನಹಳ್ಳ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆಯನ್ನು ಮುಂದುವರೆಸಲಾಗಿದೆ. ಕೇರಳದಿಂದ ಬರುವವರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್‌ ವರದಿ ಅಥವಾ ಕೋವಿಡ್‌ ಲಸಿಕೆಯನ್ನು ಪಡೆದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ ನೀಡಲಾಗುತ್ತಿದೆ.

ಪೋಷಕರಿಗೂ ತರಬೇತಿ:

ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಈಗಾಗಲೇ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯ ಮಕ್ಕಳ ತಜ್ಞರು, ಸಾಮಾನ್ಯ ವೈದ್ಯರು ಹಾಗೂ ನರ್ಸ್‌ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿ 200 ಮಂದಿಗೆ ತರಬೇತಿ ನೀಡುವ ಸಲುವಾಗಿ ಇದೇ 23 ಮತ್ತು 24 ರಂದು ಚಾಮರಾಜನಗರ ಮೆಡಿಕಲ್‌ ಕಾಲೇಜಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.

ಬೆಂಗಳೂರಿನ ಸೇಂಟ್‌ ಜಾನ್ಸ್‌ ಹಾಗೂ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯ ನಾಲ್ವರು ಮಕ್ಕಳ ತಜ್ಞ ವೈದ್ಯರು, ವೆಂಟಿಲೇಟರ್‌ ಅಳವಡಿಕೆ, ಮಕ್ಕಳಿಗೆ ಚಿಕಿತ್ಸೆ ನೀಡುವ ವಿಧಾನ, ಮಗುವಿನೊಂದಿಗೆ ಉಳಿದುಕೊಳ್ಳುವ ತಂದೆ-ತಾಯಿ ಜತೆಯಲ್ಲಿ ಮಗುವಿಗೆ ಹೇಗೆ ಚಿಕಿತ್ಸೆ ನೀಡುವುದು ಸೇರಿದಂತೆ ಇತರೆ ಅನುಸರಿಸಬೇಕಾದ ಕ್ರಮಗಳ ಕುರಿತು ಜಿಲ್ಲೆಯ ವೈದ್ಯ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ.

ಜಿಲ್ಲೆಯಲ್ಲಿ ತೆರೆಯಲಾಗಿರುವ 23 ಕೋವಿಡ್‌ ಕೇರ್‌ಗಳನ್ನು ಹಾಗೆ ಉಳಿಸಿಕೊಳ್ಳಲಾಗಿದೆ. ಸದ್ಯ ಚಾಮರಾಜನಗರದಲ್ಲಿ ನಾಲ್ಕು ಕೋವಿಡ್‌ ಕೇರ್‌ ಸೆಂಟರ್​ಗಳು ಕಾರ್ಯ ನಿರ್ವಹಿಸುತ್ತಿವೆ. ಮಕ್ಕಳಿಗಾಗಿಯೇ 50 ಬೆಡ್‌ ಇರುವ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲು ನಿರ್ಧರಿಸಿದ್ದು, ಎರಡನೇ ಅಲೆಯಲ್ಲಿ ಆದ ಅಚಾತುರ್ಯಗಳು ಮೂರನೇ ಅಲೆಯಲ್ಲಿ ನಡೆಯದಂತೆ ಜಿಲ್ಲಾಡಳಿತ ನಿಗಾ ವಹಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.