ETV Bharat / state

14 ಗಂಟೆ.. 14 ಸಾವು: ಚಾಮರಾಜನಗರದಲ್ಲಿ ಮುಂದುವರಿದ ಮೃತ್ಯುಕೇಕೆ

author img

By

Published : May 9, 2021, 12:33 PM IST

ರಾಜ್ಯಾದ್ಯಂತ ಕೊರೊನಾ ಉಲ್ಬಣ ಭೀತಿ ಹುಟ್ಟಿಸಿದೆ. ಈ ಬೆನ್ನಲ್ಲೇ ಚಾಮರಾಜನಗರದಲ್ಲಿ ಕೊರೊನಾ ಸೋಂಕಿತರ ಸಾವು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಒಂದೇ ರಾತ್ರಿಯಲ್ಲಿ 14 ಜನರು ಕೊನೆಯುಸಿರೆಳೆದಿದ್ದಾರೆ.

Chamarajanagar coronavirus death toll, ಚಾಮರಾಜನಗರದಲ್ಲಿ ನಿಲ್ಲದ ಮರಣ ಮೃದಂಗ
ಚಾಮರಾಜನಗರದಲ್ಲಿ ನಿಲ್ಲದ ಮರಣ ಮೃದಂಗ

ಚಾಮರಾಜನಗರ: ಕೋವಿಡ್ ಎರಡನೇ ಅಲೆಯಲ್ಲಿ ಮರಣ ಮೃದಂಗ ದಿನೆ ದಿನೇ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಕಳೆದ 14 ತಾಸುಗಳಲ್ಲಿ 14 ಮಂದಿ ಸೋಂಕಿತರು ಅಸುನೀಗಿದ್ದಾರೆ.

ಶನಿವಾರ ಸಂಜೆ 6 ರಿಂದ ಇಂದು ಬೆಳಗ್ಗೆ 9 ರವರೆಗೆ ಒಟ್ಟು 14 ಮಂದಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರಲ್ಲಿ 6 ಮಂದಿ ಕೊರೊನಾ ಲಕ್ಷಣಗಳಿರುವ ರೋಗಿಗಳು ಸಾವನ್ನಪ್ಪಿದ್ದು, 8 ಮಂದಿ ಸೋಂಕಿತರು ಉಸಿರಾಟ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸೋಂಕಿತರ ಸಾವುಗಳಲ್ಲಿ ರಾತ್ರಿ ವೇಳೆಯೇ ಹೆಚ್ಚು ಮಂದಿ ಮೃತಪಡುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಂತೆ ಮೃತರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೈಸೂರಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರೂ ಸಿಗದ ಬೆಡ್.. ಆಟೋದಲ್ಲೇ ಪ್ರಾಣಬಿಟ್ಟ ವ್ಯಕ್ತಿ

ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ 24 ಮಂದಿ ರೋಗಿಗಳು ಉಸಿರು ಚೆಲ್ಲಿದ್ದರು. ವೈದ್ಯಕೀಯ ಆಕ್ಸಿಜನ್​ ಕೊರತೆಯಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿತ್ತು. ಬಳಿಕ ಮಾಧ್ಯಮಗೋಷ್ಟಿ ನಡೆಸಿದ್ದ ವೈದ್ಯಕೀಯ ಮತ್ತು ಆರೋಗ್ಯ ಸಚಿವ ಸುಧಾಕರ್​, ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದು ಕೇವಲ ಮೂವರು ರೋಗಿಗಳು ಮಾತ್ರ ಎಂದು ಸ್ಪಷ್ಟನೆ ನೀಡಿದ್ರು.

ಸರ್ಕಾರದ ಮಾಹಿತಿ ತಳ್ಳಿಹಾಕಿದ್ದ ಪ್ರತಿಪಕ್ಷ ನಾಯಕರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ, ಪರಿಶೀಲಿಸಿದ್ದರು. ಅಲ್ಲದೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಬರೋಬ್ಬರಿ 34 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವರು ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.