ಚಾಮರಾಜನಗರ: ಜಿಲ್ಲೆಯಲ್ಲಿ ಒಂದಂಕಿಯಲ್ಲಷ್ಟೇ ಕಾಣುತ್ತಿದ್ದ ಕೊರೊನಾ ಪ್ರಕರಣಗಳು ಕೆಲವು ದಿನಗಳಿಂದ 50ರ ಮೇಲೆ ದಾಖಲಾಗುತ್ತಿವೆ. ಬುಧವಾರ 175 ಹೊಸ ಕೋವಿಡ್ ಕೇಸ್ ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 726ಕ್ಕೆ ಏರಿಕೆಯಾಗಿದೆ.
ಬುಧವಾರ 73 ಮಂದಿ ಗುಣಮುಖರಾಗಿದ್ದಾರೆ. 42 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 466 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 2,275 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ದೃಢಪಟ್ಟಿರುವ ಹೊಸ ಕೋವಿಡ್ ಕೇಸ್ಗಳಲ್ಲಿ ಚಾಮರಾಜನಗರ-61, ಗುಂಡ್ಲುಪೇಟೆ-37, ಕೊಳ್ಳೇಗಾಲ-40, ಹನೂರು-18, ಯಳಂದೂರಿನ 17 ಹಾಗೂ ಹೊರಜಿಲ್ಲೆಯ ಇಬ್ಬರು ವ್ಯಕ್ತಿಗಳಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3 ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ.