ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2.21 ಕೋಟಿ ರೂ. ಸಂಗ್ರಹವಾಗಿದೆ.
ಕಳೆದ ಬಾರಿ 42 ದಿನಗಳ ಅವಧಿಯಲ್ಲಿ 1.92 ಕೋಟಿ ರೂ. ಸಂಗ್ರಹವಾಗಿತ್ತು. ಆದರೆ, ಈಗ ಒಂದು ತಿಂಗಳಿಗೆ 2,21,59,810 ಕೋಟಿ ರೂ. ಸಂಗ್ರಹವಾಗಿದ್ದು, ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೆ ಹರಿಸಿದ್ದಾರೆ. ಕೊರೊನಾ ನಂತರದಲ್ಲಿ ಉತ್ಸವಗಳು, ವಿಶೇಷ ಸೇವೆಗಳಿಗೆ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಇಷ್ಟು ಮೊತ್ತದ ಹಣ ಸಂಗ್ರಹವಾಗಿದೆ ಎನ್ನಲಾಗಿದೆ.
ಓದಿ: ಸಂಸತ್ತಿನ ಅಧ್ಯಕ್ಷರ ಜಂಟಿ ಭಾಷಣಕ್ಕೆ ಹಾಜರಾಗುವುದಿಲ್ಲ ಎಂದ ಹೆಚ್ಡಿಡಿ
ಕಳೆದ ಹುಂಡಿ ಎಣಿಕೆಯಲ್ಲಿ 170 ಗ್ರಾಂ ಚಿನ್ನ, 3.8 ಕೆಜಿ ಬೆಳ್ಳಿ ಸಂಗ್ರಹವಾಗಿತ್ತು. ಆದರೆ, ಈ ಬಾರಿ 80 ಗ್ರಾಂ ಚಿನ್ನ ಹಾಗೂ 2 ಕೆಜಿ ಬೆಳ್ಳಿ ಮಾತ್ರ ಕಾಣಿಕೆ ರೂಪದಲ್ಲಿ ಭಕ್ತರು ಮಾದಪ್ಪನಿಗೆ ಅರ್ಪಿಸಿದ್ದಾರೆ. ಮಹಾಮಾರಿ ಕರಿಛಾಯೆ ಬಳಿಕ ಮಾದಪ್ಪ ಮತ್ತೆ ಶ್ರೀಮಂತನಾಗುತ್ತಿದ್ದು, ಭಕ್ತರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ.