ETV Bharat / state

ಪ್ರತ್ಯೇಕ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ 20 ವರ್ಷ ಕಠಿಣ ಶಿಕ್ಷೆ - ಇಬ್ಬರು ಅಪರಾಧಿಗಳಿಗೆ 20 ವರ್ಷ ಕಠಿಣ ಶಿಕ್ಷೆ

ಚಾಮರಾಜನಗರ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರು ಅತ್ಯಾಚಾರ ಅಪರಾಧಿಗಳಿಗೆ ತಲಾ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ಗಳ ದಂಡ ವಿಧಿಸಿ ಆದೇಶ ಹೊರಡಿಸಿದೆ.

rape case convicts
ಅತ್ಯಾಚಾರ ಆರೋಪಿಗಳು
author img

By ETV Bharat Karnataka Team

Published : Aug 24, 2023, 9:05 AM IST

ಚಾಮರಾಜನಗರ : ಪ್ರತ್ಯೇಕ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾಮರಾಜನಗರ ಮಕ್ಕಳ ಸ್ನೇಹಿ ಹಾಗೂ 1 ನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರು ಅಪರಾಧಿಗಳಿಗೆ ತಲಾ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲದೆ, ಸಂತ್ರಸ್ತ ಅಪ್ರಾಪ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ.ಗಳನ್ನು 30 ದಿನದ ಒಳಗೆ ಪರಿಹಾರವಾಗಿ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾ. ಎ.ಸಿ.ನಿಶಾರಾಣಿ ಆದೇಶ ನೀಡಿದ್ದಾರೆ.

ಪ್ರಕರಣ - 1 : 5 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರ ಬಸವರಾಜು (35) ಶಿಕ್ಷೆಗೊಳಗಾದ ಅಪರಾಧಿ. ಈತ 2019 ರ ಡಿ. 2 ರಂದು ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ, ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.‌ ಸಾಕ್ಷ್ಯಾಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಸವರಾಜನಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ಗಳ ದಂಡ ವಿಧಿಸಲಾಗಿದೆ.

ಇದನ್ನೂ ಓದಿ : ಅತ್ಯಾಚಾರ ಆರೋಪಿ ಬಿಡುಗಡೆಗೆ ನಕಲಿ ಜಾಮೀನು ಆದೇಶ ನೀಡಿದ ಪೋಕ್ಸೋ ಕೋರ್ಟ್​ ಕ್ಲರ್ಕ್ ​!

ಪ್ರಕರಣ - 2 : 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಚಾಮರಾಜನಗರ ತಾಲೂಕಿನ ಗ್ರಾಮವೊಂದರ ನಾಗೇಶ್(23) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ 2021 ರ ಸೆಪ್ಟಂಬರ್ 13 ರಂದು 12 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ, ತನ್ನ ಜೊತೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.‌ ಈತನ ವಿರುದ್ಧದ ಆರೋಪ ಸಾಕ್ಷಾಧಾರಗಳಿಂದ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷ ಕಠಿಣ ಶಿಕ್ಷೆ, 20 ಸಾವಿರ ದಂಡ ವಿಧಿಸಲಾಗಿದೆ. ಈ ಎರಡು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ .. ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು

ಇನ್ನು ಬಾಲಕಿಗೆ ಮತ್ತು ಬರುವ ಔಷಧ ನೀಡಿ ಇಬ್ಬರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಇತ್ತೀಚೆಗೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಗೆಳೆಯರೇ ಅತ್ಯಾಚಾರ ಎಸಗಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಶಾಬಾಸ್ (26), ಅಜಯ್ (32) ಎಂದು ಗುರುತಿಸಲಾಗಿದೆ. ಈ ಇಬ್ಬರು ಯುವಕರು ಬಾಲಕಿಯನ್ನು ಪುಸಲಾಯಿಸಿ ಪ್ರವಾಸಕ್ಕೆಂದು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪಾನೀಯದಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಅತ್ಯಾಚಾರ ನಡೆಸಿದ್ದಾರೆ. ಆಗಸ್ಟ್ 19 ರಂದು ಘಟನೆ ನಡೆದಿದೆ.

ಇದನ್ನೂ ಓದಿ : ಶಿವಮೊಗ್ಗ : ಅಪ್ರಾಪ್ತೆಗೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ, ಇಬ್ಬರ ವಿರುದ್ಧ ಪೋಕ್ಸೊ ಕೇಸ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.