ಚಾಮರಾಜನಗರ: ಕೊರೊನಾ ಎರಡನೇ ಅಲೆಯ ಅಬ್ಬರದಲ್ಲಿ ಸಿಲುಕಿರುವ ಜಿಲ್ಲೆಯಲ್ಲಿ ನಿನ್ನೆ 275 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ.
ನಿನ್ನೆ 109 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,294 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 58 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 909 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಇನ್ನೂ 3,575 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಸೋಂಕಿತೆ ಸಾವು
ಚಾಮರಾಜನಗರ ತಾಲೂಕಿನ ಬಾಣಳ್ಳಿ ಗ್ರಾಮದ 62 ವರ್ಷದ ವೃದ್ಧೆ 23 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 122ಕ್ಕೆ ತಲುಪಿದೆ.
ಇದನ್ನೂ ಓದಿ: ಕನ್ಸ್‌ಟ್ರಕ್ಷನ್-ಅಗ್ರಿಕಲ್ಚರ್ ಕಾಮಗಾರಿಗೆ ಪಂಪ್‌ಸೆಟ್ ಅಂಗಡಿ ತೆರೆಯಲು ಅನುಮತಿ ನೀಡಿ