ಚಾಮರಾಜನಗರ: ಭಾನುವಾರ 283 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,492ಕ್ಕೆ ಏರಿಕೆಯಾಗಿದೆ.
ನಿನ್ನೆ 82 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. 58 ಮಂದಿ ಐಸಿಯುನಲ್ಲಿದ್ದು, 1,097 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 3,675 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಯಳಂದೂರಿನ 56 ವರ್ಷದ ಮಹಿಳೆ ಹಾಗೂ ಕೊಳ್ಳೇಗಾಲ ತಾಲೂಕಿನ ಬೂದಿತಟ್ಟು ಗ್ರಾಮದ 45 ವರ್ಷದ ವ್ಯಕ್ತಿ ಕಳೆದ 24 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಳೆದ 20 ರಂದು ಆಸ್ಪತ್ರೆಗೆ ದಾಖಲಾಗಿದ್ದ ಕೊಳ್ಳೇಗಾಲದ 71 ವರ್ಷದ ವೃದ್ಧ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 125 ಕ್ಕೆ ಏರಿಕೆಯಾಗಿದೆ.