ಚಾಮರಾಜನಗರ : ಜಿಲ್ಲೆಯಲ್ಲಿಂದು 31 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3107ಕ್ಕೆ ಏರಿಕೆಯಾಗಿದೆ. ಕೋವಿಡ್ ಹಾಗೂ ಕೋವಿಡೇತರ ಕಾರಣಗಳಿಗೆ ಇಬ್ಬರು ಬಲಿಯಾಗಿದ್ದಾರೆ.
98 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 539ಕ್ಕೆ ಇಳಿಕೆಯಾಗಿದೆ. 243 ಮಂದಿ ಹೋಂ ಐಸೋಲೇಷನ್ನಲ್ಲಿದ್ದು, 24 ಮಂದಿ ಐಸಿಯುನಲ್ಲಿದ್ದಾರೆ. 497 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ಕೊಳ್ಳೇಗಾಲ ತಾಲೂಕಿನ ಹಂಪಾಪುರ ಗ್ರಾಮದ 65 ವರ್ಷದ ವೃದ್ಧನಿಗೆ ಸೋಂಕು ದೃಢಪಟ್ಟು, ಕಳೆದ 5ರಿಂದ ಹೋಂ ಐಸೋಲೇಷನ್ನಲ್ಲಿದ್ದರು. ಆದರೆ, ಇಂದು ಮಹಾಮಾರಿಗೆ ಬಲಿಯಾಗಿದ್ದಾರೆ. ಚಾಮರಾಜನಗರ ತಾಲೂಕಿನ ಭುಜಗನಪುರ ಗ್ರಾಮದ 62 ವರ್ಷದ ವೃದ್ಧ ಹೃದಯ ಸಂಬಂಧಿ ಹಾಗೂ ಕರುಳಿನ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿ ಅಸುನೀಗಿದ್ದಾರೆ. ನಿಧನದ ನಂತರ ನಡೆದ ಗಂಟಲುದ್ರವ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿದೆ.